ಮುಂಬೈ :
ಜಿಂಬಾಬ್ವೆ ಬಳಿಕ ಭಾರತ ತಂಡ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದೆ. ಈ ಪ್ರವಾಸದ ವೇಳಾಪಟ್ಟಿಯನ್ನು ಬಿಸಿಸಿಐ ಗುರುವಾರ ಬಿಡುಗಡೆ ಮಾಡಿದೆ. ವೇಳಾಪಟ್ಟಿಯ ಪ್ರಕಾರ ಭಾರತ ತಂಡ ಮೂರು ಪಂದ್ಯಗಳ ಟಿ20 ಮತ್ತು ಮೂರು ಪಂದ್ಯಗಳ ಏಕದಿನ ಸರಣಿಯನ್ನು ಈ ಪ್ರವಾಸಲ್ಲಿ ಆಡಲಿದೆ.
ಪ್ರಸ್ತುತ ಟೀಂ ಇಂಡಿಯಾ ಜಿಂಬಾಬ್ವೆ ಪ್ರವಾಸದಲ್ಲಿದೆ. ಈ ಪ್ರವಾಸದಲ್ಲಿ ಐದು ಟಿ20 ಪಂದ್ಯಗಳು ನಡೆಯಲ್ಲಿದ್ದು, ಈಗಾಗಲೇ 3 ಪಂದ್ಯಗಳು ಮುಗಿದಿವೆ. ಇದರಲ್ಲಿ ಟೀಂ ಇಂಡಿಯಾ 2-1 ಅಂತರದಿಂದ ಮುನ್ನಡೆ ಸಾಧಿಸಿದೆ. ಜಿಂಬಾಬ್ವೆ ಬಳಿಕ ಭಾರತ ತಂಡ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದೆ. ಈ ಪ್ರವಾಸದ ವೇಳಾಪಟ್ಟಿಯನ್ನು ಬಿಸಿಸಿಐ ಗುರುವಾರ ಬಿಡುಗಡೆ ಮಾಡಿದೆ. ವೇಳಾಪಟ್ಟಿಯ ಪ್ರಕಾರ ಭಾರತ ತಂಡ ಮೂರು ಪಂದ್ಯಗಳ ಟಿ20 ಮತ್ತು ಮೂರು ಪಂದ್ಯಗಳ ಏಕದಿನ ಸರಣಿಯನ್ನು ಈ ಪ್ರವಾಸಲ್ಲಿ ಆಡಲಿದೆ.
ವೇಳಾಪಟ್ಟಿ ಹೀಗಿದೆ
ಜುಲೈ 26ರಿಂದ ಭಾರತದ ಶ್ರೀಲಂಕಾ ಪ್ರವಾಸ ಆರಂಭವಾಗಲಿದೆ. ಮೊದಲು ಟಿ20 ಸರಣಿ ನಡೆಯಲಿದೆ. ಇದಾದ ಬಳಿಕ ಏಕದಿನ ಸರಣಿ ಆರಂಭವಾಗಲಿದೆ. ಟಿ20 ಸರಣಿಯ ಮೊದಲ ಪಂದ್ಯ ಜುಲೈ 26 ರಂದು ಪಲ್ಲೆಕೆಲೆಯಲ್ಲಿ ನಡೆಯಲಿದೆ. ಎರಡನೇ ಟಿ20 ಜುಲೈ 27 ರಂದು ಮತ್ತು ಮೂರನೇ ಪಂದ್ಯ ಜುಲೈ 29 ರಂದು ನಡೆಯಲಿದೆ. ಟಿ20 ಸರಣಿಯ ಎಲ್ಲಾ ಮೂರು ಪಂದ್ಯಗಳು ರಾತ್ರಿ 7 ಗಂಟೆಗೆ ಆರಂಭವಾಗಲಿದ್ದು, ಏಕದಿನ ಸರಣಿಯ ಮೊದಲ ಪಂದ್ಯ ಆಗಸ್ಟ್ 1 ರಂದು ನಡೆಯಲಿದೆ. ಎರಡನೇ ಪಂದ್ಯ ಆಗಸ್ಟ್ 4 ರಂದು ಮತ್ತು ಮೂರನೇ ಪಂದ್ಯ ಆಗಸ್ಟ್ 7 ರಂದು ನಡೆಯಲಿದೆ. ಈ ಮೂರು ಪಂದ್ಯಗಳು ಮಧ್ಯಾಹ್ನ 2:30ಕ್ಕೆ ಆರಂಭವಾಗಲಿವೆ.
ಪ್ರಸ್ತುತ ವೇಳಾಪಟ್ಟಿ ಪ್ರಕಟವಾಗಿದ್ದು, ಶ್ರೀಲಂಕಾ ಪ್ರವಾಸಕ್ಕೆ ಭಾರತ ತಂಡವನ್ನು ಶೀಘ್ರದಲ್ಲೇ ಪ್ರಕಟಿಸಬಹುದಾಗಿದೆ. ವರದಿಗಳ ಪ್ರಕಾರ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಈ ಪ್ರವಾಸದಿಂದ ಹೊರಗುಳಿಯಲ್ಲಿದ್ದು, ಜಸ್ಪ್ರೀತ್ ಬುಮ್ರಾ ಅವರಿಗೂ ಪ್ರವಾಸದಿಂದ ವಿಶ್ರಾಂತಿ ನೀಡಲಾಗುವುದು ಎಂದು ವರದಿಯಾಗಿದೆ. ಹಾರ್ದಿಕ್ ಪಾಂಡ್ಯ ಟಿ20 ತಂಡವನ್ನು ಮುನ್ನಡೆಸಲ್ಲಿದ್ದು, ಕೆಎಲ್ ರಾಹುಲ್ ಅವರಿಗೆ ಏಕದಿನ ತಂಡದ ನಾಯಕತ್ವವನ್ನು ನೀಡಲಾಗುವುದು ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.
ಶ್ರೀಲಂಕಾ ತಂಡ ಮೊದಲಿನಷ್ಟು ಬಲಿಷ್ಠವಾಗಿಲ್ಲ ಆದರೆ ಈ ತಂಡವನ್ನು ಕಡಿಮೆ ಅಂದಾಜು ಮಾಡುವಂತಿಲ್ಲ. 2021ರಲ್ಲಿ ಭಾರತ ತಂಡ ಕೊನೆಯ ಬಾರಿಗೆ ಶ್ರೀಲಂಕಾಕ್ಕೆ ಭೇಟಿ ನೀಡಿತ್ತು. ಏಕದಿನ ಸರಣಿಯನ್ನು ಗೆದ್ದರೂ ಟಿ20 ಸರಣಿಯಲ್ಲಿ 1-2 ಅಂತರದಿಂದ ಸೋಲನುಭವಿಸಬೇಕಾಯಿತು. ಆಗ ತಂಡದ ಕೋಚ್ ರಾಹುಲ್ ದ್ರಾವಿಡ್. ಅಂದಹಾಗೆ, ಭಾರತದ ಶ್ರೀಲಂಕಾ ಪ್ರವಾಸಕ್ಕೂ ಮುನ್ನವೇ ಆತಿಥೇಯ ತಂಡದ ನಾಯಕ ವನಿಂದು ಹಸರಂಗ ಅವರು ತಮ್ಮ ಸ್ಥಾನವನ್ನು ತೊರೆದಿರುವುದು ದೊಡ್ಡ ಸುದ್ದಿಯಾಗಿದೆ. ಈಗ ಟೀಂ ಇಂಡಿಯಾವನ್ನು ಎದುರಿಸುವ ಮೊದಲು ಶ್ರೀಲಂಕಾ ಹೊಸ ನಾಯಕನನ್ನು ಆಯ್ಕೆ ಮಾಡಬೇಕಾಗುತ್ತದೆ. ಶ್ರೀಲಂಕಾ ತಂಡ ಕೂಡ ಹೊಸ ಮುಖ್ಯ ಕೋಚ್‌ನೊಂದಿಗೆ ಕಣಕ್ಕಿಳಿಯಲಿದೆ. ಶ್ರೀಲಂಕಾದ ಹಂಗಾಮಿ ಕೋಚ್ ಆಗಿ ಹಿರಿಯ ಆಟಗಾರ ಸನತ್ ಜಯಸೂರ್ಯ ಅವರನ್ನು ನೇಮಕ ಮಾಡಲಾಗಿದೆ.