ಬೆಂಗಳೂರು:
ಬಿಜೆಪಿ ಶಾಸಕ ಮುನಿರತ್ನ ಅವರು ಯಾಕೊ ವಿವಾದ ಮೈಮೇಲೆ ಎಳೆದುಕೊಳ್ಳುವ ಲಕ್ಷಣ ದಟ್ಟವಾಗಿವೆ ಏಕೆಂದರೆ ಅವರು ಇತ್ತೀಚೆಗೆ ನೀಡುತ್ತಿರುವ ಹೇಳಿಕೆಗಳು .ಅದರಲ್ಲಿ ಸದ್ಯ ಕ್ರಿಶ್ಚಿಯನ್ನರ ಕುರಿತು ದ್ವೇಷಪೂರಿತ ಭಾಷಣ ಮಾಡಿದ ಆರೋಪದ ಮೇಲೆ ತೋಟಗಾರಿಕೆ ಸಚಿವ ವಿ. ಮುನಿರತ್ನ ವಿರುದ್ಧ ಪ್ರಕರಣ ದಾಖಲಾಗಿದೆ.
ಈ ಸಂಬಂಧ ಗೆಜೆಟೆಡ್ ಅಧಿಕಾರಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಸಚಿವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅವರ ಜನರು ನಡುವೆ ದ್ವೇಷವನ್ನು ಪ್ರಚೋದಿಸುವ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಮಾರ್ಚ್ 31 ರಂದು ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ “ಕ್ರೈಸ್ತರು ಈ ಕ್ಷಣದಲ್ಲಿಯೂ ಜನರನ್ನು ಮತಾಂತರ ಮಾಡುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದರು.
