ಬೆಂಗಳೂರು :
ಮಂಡ್ಯದ ಸಂಸದೆ ಸುಮಲತಾ ಅಂಬರೀಷ್ ಯಾವ ಪಕ್ಷ ಸೇರ್ಪಡೆಯಾಗುತ್ತಾರೆ ಎಂಬ ಕುತೂಹಲಕ್ಕೆ ತೆರೆ ಬೀಳಲಿದ್ದು, ಅವರು ಬಿಜೆಪಿ ಸೇರುವ ಸಾಧ್ಯತೆಗಳಿವೆ. ಮಂಡ್ಯದ ತಮ್ಮ ನಿವಾಸದಲ್ಲಿ ಸುಮಲತಾ ಅಂಬರೀಷ್ ಅವರು ಇಂದು ಆಪ್ತರ ಸಭೆ ಕರೆದಿದ್ದು, ಅವರ ಜತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಿದ್ದು, ಮಧ್ಯಾಹ್ನ ಸುದ್ದಿಗೋಷ್ಠಿಯಲ್ಲಿ ಪಕ್ಷ ಸೇರ್ಪಡೆ ತೀರ್ಮಾನವನ್ನು ಪ್ರಕಟಿಸುವರು ಎಂದು ಅವರ ಆಪ್ತ ಮೂಲಗಳು ಹೇಳಿವೆ.
ಪ್ರಧಾನಿ ಮೋದಿ ಅವರು ಇದೇ ತಿಂಗಳ 12 ಭಾನುವಾರ ಮಂಡ್ಯಕ್ಕೆ ಭೇಟಿ ನೀಡುತ್ತಿದ್ದು, ಈ ಸಂದರ್ಭದಲ್ಲೇ ಸುಮಲತಾ ಅಂಬರೀಷ್‌ರವರು ಮೋದಿ ಸಮ್ಮುಖದಲ್ಲೇ ಬಿಜೆಪಿ ಸೇರುವರು ಎಂದು ಹೇಳಲಾಗಿದೆ.
ಸಂಸದೆ ಸುಮಲತಾ ಅಂಬರೀಷ್‌ರವರಿಗೆ ಪಕ್ಷ ಸೇರುವಂತೆ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳು ಆಹ್ವಾನ ನೀಡಿದ್ದವು. ಆದರೆ, ಸುಮಲತಾ ಅಂಬರೀಷ್‌ರವರು ತಮ್ಮ ಆಪ್ತರೊಂದಿಗೆ ಈಗಾಗಲೇ ಹಲವು ಸುತ್ತಿನ ಸಭೆ ನಡೆಸಿದ್ದು, ಬಿಜೆಪಿ ಸೇರುವ ಸಾಧ್ಯತೆ ಇದೆ. ಕೆಲ ದಿನಗಳ ಹಿಂದೆ ಅವರು ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ರವನ್ನು ಭೇಟಿ ಮಾಡಿ ಚರ್ಚಿಸಿದ್ದರು.
ಇದನ್ನೂ ಓದಿ:
ಸುಮಲತಾ ಬಿಜೆಪಿ ಸೇರ್ಪಡೆ ಕುರಿತು ಪುಟ್ಟರಾಜು, ಸಂಸದೆ ಸುಮಲತಾ ಅಂಬರೀಷ್, ಇಂದೇ ಬಿಜೆಪಿ ಸೇರುತ್ತಾರೆ ಎಂದು ಜೆಡಿಎಸ್ ಶಾಸಕ ಪುಟ್ಟರಾಜು ಬಾಂಬ್ ಸಿಡಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಸಮ್ಮುಖದಲ್ಲೇ ಸುಮಲತಾ ಅಂಬರೀಷ್ ಬಿಜೆಪಿ ಸೇರ್ಪಡೆಗೆ ಪ್ಲಾನ್ ಮಾಡಿದ್ದರು. ಪ್ರಧಾನಿಯವರ ಕಾರ್ಯಕ್ರಮ ಸರ್ಕಾರಿ ಕಾರ್ಯಕ್ರಮ ಆಗಿರುವುದರಿಂದ ಇಂದೇ ಸುಮಲತಾ ಬಿಜೆಪಿ ಸೇರುತ್ತಾರೆ ಎಂದು ಹೇಳಿ ಅಚ್ಚರಿ ಮೂಡಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ