ನಾಳೆ ವಿದ್ಯುತ್ ಪೂರೈಕೆ ಸ್ಥಗಿತ…..!

ನಾಯಕನಹಟ್ಟಿ :

    ಬೆಸ್ಕಾಂ ತಳಕು ಉಪವಿಭಾಗದ ವ್ಯಾಪ್ತಿಯಲ್ಲಿರುವ ನಾಯಕನಹಟ್ಟಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕೆ.ಪಿ.ಟಿ.ಸಿ.ಎಲ್.ವತಿಯಿಂದ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಪ್ರಯುಕ್ತ ಮಂಗಳವಾರ ವಿದ್ಯುತ್ ಪೂರೈಕೆ ಸ್ಥಗಿತವಾಗಲಿದೆ.

     ನಾಯಕನಹಟ್ಟಿ 66/11 ಕೆವಿ ವಿದ್ಯುತ್‌ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ನಾಯಕನಹಟ್ಟಿ ಪಟ್ಟಣ, ಗೌಡಗೆರೆ, ಮಲ್ಲೂರಹಳ್ಳಿ, ಎನ್.ಮಹದೇವಪುರ, ಎನ್.ದೇವರಹಳ್ಳಿ, ನೇರಲಗುಂಟೆ, ನೆಲಗೇತನಹಟ್ಟಿ ಗ್ರಾಮಪಂಚಾಯಿತಿ ಸೇರಿದಂತೆ ಎಲ್ಲ ಗ್ರಾಮಗಳ ವ್ಯಾಪ್ತಿಯಲ್ಲಿ ದಿನಾಂಕ 24.06.2025 ರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆ ಇರುವುದಿಲ್ಲ. ಆದ್ದರಿಂದ ಗ್ರಾಹಕರು,ರೈತರು ಸಹಕರಿಸಬೇಕೆಂದು ಎಂದು ಕೆಪಿಟಿಸಿಎಲ್ ಸಹಾಯಕ‌ ಕಾರ್ಯ ನಿರ್ವಾಹಕ ಎಂಜಿನಿಯರ್ ಡಿ.ಎಸ್. ಪ್ರಸನ್ನಕುಮಾರ್ ಪ್ರತ್ರಿಕಾ ಪ್ರಕಟಣೆಯಲ್ಲಿ‌ ತಿಳಿಸಿದ್ದಾರೆ.

Recent Articles

spot_img

Related Stories

Share via
Copy link