ಬೆಲೆಏರಿಕೆ ಖಂಡಿಸಿ ಕಾಂಗ್ರೆಸ್ ಸೈಕಲ್ ರ್ಯಾಲಿ ಪ್ರತಿಭಟನೆ

 ಕುಣಿಗಲ್ :

      ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಶಾಸಕ ಡಾ. ಎಚ್.ಡಿ ರಂಗನಾಥ್ ಸೈಕಲ್ ಸವಾರಿ ಮೂಲಕ ಪ್ರತಿಭಟನೆ ನಡೆಸಿದರು.

      ತಾಲೂಕು ಯುವ ಕಾಂಗ್ರೆಸ್ ಘಟಕದ ವತಿಯಿಂದ ಸೈಕಲ್ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರ ಪೆಟ್ರೋಲ್ ಡೀಸೆಲ್ ಸೇರಿದಂತೆ ಜನಸಾಮಾನ್ಯರ ಬದುಕಿಗೆ ಮಾರಕವಾದ ಅವಶ್ಯಕ ವಸ್ತುಗಳು ಸೇರಿದಂತೆ ಎಲ್ಲ ವಸ್ತುಗಳ ಮೇಲೆ ತೆರಿಗೆ ವಿಧಿಸಿ ಬಡವರು ರೈತರು ಶೋಷಿತರು ಜೀವನ ಕಷ್ಟಕರವಾಗಿರುವುದರಿಂದ ಕಾರ್ಮಿಕರ ಸಮಸ್ಯೆ ರೈತರ ಸಮಸ್ಯೆ ನಿರುದ್ಯೋಗಿ ಸಮಸ್ಯೆ ಸೇರಿದಂತೆ ಹಲವು ಸಮಸ್ಯೆಗಳು ಎದುರಾಗಿದೆ ಎಂದರು.

      ಜನಸಾಮಾನ್ಯರ ಬದುಕಿನಲ್ಲಿ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ದುರಾಡಳಿತದ ಪರಮಾವಧಿಯಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು 100 ದಿನದಲ್ಲಿ ರಾಷ್ಟ್ರದಲ್ಲಿ ಬದಲಾವಣೆ ತರುವುದಾಗಿ ನೀಡಿದ ಭರವಸೆಯ ಆಶ್ವಾಸನೆ ಏನಾಯಿತು ಎರಡು ಕೋಟಿ ನಿರುದ್ಯೋಗ ಯುವಕರಿಗೆ ಉದ್ಯೋಗ ನೀಡುವ ಭರವಸೆ ಏನಾಯಿತು. ಕೊರೊನಾ ಸಂದರ್ಭದಲ್ಲಿ ದೀಪಾ ಹಚ್ಚಿ ಜಾಗಟೆ ಬಡಿರಿಎಂದು ಹೇಳುವ ಪ್ರಧಾನಮಂತ್ರಿಗಳು ರೈತರ ಗೊಬ್ಬರ ಡೀಸೆಲ್-ಪೆಟ್ರೋಲ್ ಗ್ಯಾಸ್ ಸೇರಿದಂತೆ ಎಲ್ಲಾ ಅವಶ್ಯಕ ವಸ್ತುಗಳು ಏರಿಕೆಯಿಂದ ಜನಸಾಮಾನ್ಯರ ಬದುಕು ನರಕವಾಗಿದೆ ಎಂದರು.

      ಪ್ರಧಾನಮಂತ್ರಿಗಳ ಆರು ವರ್ಷಗಳ ಆಡಳಿತವು ದೇಶದಲ್ಲಿ ಕತ್ತಲು ಆವರಿಸಿದೆ. ಬಿಜೆಪಿ ಸರ್ಕಾರವನ್ನು ಬದಲಾಯಿಸುವಂತೆ ಆಗ್ರಹಿಸಿ ಪಟ್ಟಣದಾದ್ಯಂತ ಯುವ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಸೈಕಲ್ ಏರಿ ಪ್ರತಿಭಟನೆಯನ್ನು ನಡೆಸುತ್ತಿರುವುದಾಗಿ ತಿಳಿಸಿದ ಅವರು ಕೂಡಲೇ ಪೆಟ್ರೋಲ್-ಡೀಸೆಲ್ ಸೇರಿದಂತೆ ಅವಶ್ಯಕ ವಸ್ತುಗಳ ಜನಸಾಮಾನ್ಯರಿಗೆ ದೊರಕುವಂತೆ ಮಾಡಬೇಕೆಂದು ಒತ್ತಾಯ ಮಾಡಿದರಲ್ಲದೇ ಈಸಂಬಂಧ ಮುಂಬರುವ ದಿನಗಳಲ್ಲಿ ಉಗ್ರ ಹೋರಾಟವನ್ನು ನಡೆಸಲಾಗುವುದು ಎಂದು ಎಚ್ಚರಿಸಿದರು.

      ಈ ಸಂದರ್ಭದಲ್ಲಿ ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಲೋಹಿತ್ ಪುರಸಭಾ ಉಪಾಧ್ಯಕ್ಷರಾದ ಮಂಜುಳಾ ರಂಗಪ್ಪ ಸುಂದರ ಕುಪ್ಪೆ ಪಾಪಣ್ಣ ಸೇರಿದಂತೆ ನೂರಾರು ಯುವ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap