2 ಅಂತಸ್ತಿನ ಕಟ್ಟಡದಲ್ಲಿ ಸಿಲಿಂಡರ್ ಸ್ಫೋಟ : 10 ಮಂದಿ ದುರ್ಮರಣ!!!

ಮವೂ: 

    ಸಿಲಿಂಡರ್ ಸ್ಫೋಟಗೊಂಡು ಎರಡು ಅಂತಸ್ತಿನ ಕಟ್ಟಡ ಕುಸಿದು ಕನಿಷ್ಠ 10 ಮಂದಿ ಸಾವಿಗೀಡಾಗಿರುವ ಘಟನೆ ಉತ್ತರ ಪ್ರದೇಶದ ಮೊಹಮ್ಮದಾಬಾದ್‌ನಲ್ಲಿ ಸೋಮವಾರ ನಡೆದಿದೆ. 

      ದುರಂತದಲ್ಲಿ ಹಲವು ಮಂದಿ ಗಾಯಗೊಂಡಿದ್ದು, ಮನೆಯ ಅವಶೇಷಗಳ ಅಡಿಯಲ್ಲಿ ಜನರು ಸಿಲುಕಿರುವುದಾಗಿ ಶಂಕಿಸಲಾಗಿದೆ.

      ಘಟನೆ ನಡೆದ ಸ್ಥಳದಲ್ಲಿ ಪೊಲೀಸ್ ಮತ್ತು ಅಗ್ನಿಶಾಮಕ ದಳದ ತಂಡವೊಂದು ಪ್ರಸ್ತುತ ರಕ್ಷಣಾ ಕಾರ್ಯಗಳನ್ನು ನಿರ್ವಹಿಸುತ್ತಿದೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವವರ ರಕ್ಷಣೆ ಕಾರ್ಯದಲ್ಲಿ ತೊಡಗಿದೆ.  

      ಸಂತ್ರಸ್ತರಿಗೆ ಸೂಕ್ತ ಸಹಾಯ ಒದಗಿಸುವಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap