ಡಿ.31: ಪೆಟ್ರೋಲ್ ದರದಲ್ಲಿ 25 ರೂ. ಕಡಿತಗೊಳಿಸಿದ  ರಾಜ್ಯ

ನವದೆಹಲಿ:
ಡಿ.31: ಪೆಟ್ರೋಲ್ ದರದಲ್ಲಿ 25 ರೂ. ಕಡಿತಗೊಳಿಸಿದ ಈ ರಾಜ್ಯ: ನಿಮ್ಮ ನಗರದಲ್ಲಿ ದರವೆಷ್ಟು?
ಡಿಸೆಂಬರ್ 31: ದೇಶದ ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ದೇಶದಲ್ಲಿ ಇಂದು (ಡಿಸೆಂಬರ್ 31, ಶುಕ್ರವಾರ) ಸಹ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

 

          ಒಂದೂವರೆ ತಿಂಗಳ ನಂತರವೂ ಇಂಧನ ದರ ಸ್ಥಿರತೆ ಕಾಪಾಡಿಕೊಂಡಿದೆ. ಕಳೆದ ತಿಂಗಳ ದೀಪಾವಳಿ ಹಬ್ಬದ ವೇಳೆ ಕೇಂದ್ರ ಹಾಗೂ ವಿವಿಧ ರಾಜ್ಯಗಳಲ್ಲಿ ಅಬಕಾರಿ ಸುಂಕ, ಸೆಸ್, ವ್ಯಾಟ್ ಇಳಿಕೆ ಮಾಡಿದ ಬಳಿಕ ಭಾರತದಲ್ಲಿ ಇಂಧನ ದರ ಭಾರಿ ಇಳಿಕೆ ಕಂಡಿತ್ತು.

           ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರಿಳಿತ ಕಾಣುತ್ತಿದೆ. ಕೇಂದ್ರ ಹಾಗೂ ವಿವಿಧ ರಾಜ್ಯಗಳಲ್ಲಿ ಅಬಕಾರಿ ಸುಂಕ, ಸೆಸ್, ವ್ಯಾಟ್ ಇಳಿಕೆ ಮಾಡಿ ತಿಂಗಳು ಕಳೆದರೂ ಭಾರತದಲ್ಲಿ ಇಂಧನ ದರದಲ್ಲಿ ಬದಲಾವಣೆ ಕಂಡಿಲ್ಲ.

ದೆಹಲಿ ಸರ್ಕಾರವು ಕಳೆದ ವಾರ ಪೆಟ್ರೋಲ್ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು (ವ್ಯಾಟ್) ಶೇ.30ರಿಂದ ಶೇ.19.4ಕ್ಕೆ ಕಡಿಮೆ ಮಾಡಲು ನಿರ್ಧರಿಸಿದ್ದು, ನಗರದಲ್ಲಿ ಇಂಧನದ ಬೆಲೆಯನ್ನು ಲೀಟರ್‌ಗೆ ಸುಮಾರು 8 ರೂಪಾಯಿಗಳಷ್ಟು ಕಡಿಮೆ ಮಾಡಿದೆ.

ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಶುಕ್ರವಾರದಂದು ಪೆಟ್ರೋಲ್, ಡೀಸೆಲ್ ದರದಲ್ಲಿ ಯಾವುದೇ ಪರಿಷ್ಕರಣೆ ಮಾಡಿಲ್ಲ. ಡೀಸೆಲ್ ಬೆಲೆ ಏರಿಕೆಯಿಂದ ಸರಕು ಸಾಗಣೆ ವ್ಯತ್ಯಯ, ಅಗತ್ಯ ವಸ್ತುಗಳ ಬೆಲೆ ಏರಿಕೆಗೂ ಕಾರಣವಾಗಿತ್ತು.

ಆದರೆ, ಅನೇಕ ನಗರಗಳಲ್ಲಿ ಇಂಧನ ದರ ತಗ್ಗಿದೆ. ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಲ್ಲೂ ತೆರಿಗೆ ತಗ್ಗಿಸಲಾಗಿದೆ. ತಮಿಳುನಾಡು, ಪುದುಚೇರಿ ರಾಜ್ಯಗಳಲ್ಲಿ ಬಜೆಟ್ ವೇಳೆ ತಗ್ಗಿಸಿರುವುದರಿಂದ ಮತ್ತೊಮ್ಮೆ ವ್ಯಾಟ್ ತಗ್ಗಿಸುವುದಿಲ್ಲ ಎಂದು ಅಲ್ಲಿನ ಸರ್ಕಾರ ಹೇಳಿವೆ.

ಜಾರ್ಖಂಡ್​ ಸರ್ಕಾರ ದ್ವಿಚಕ್ರ ವಾಹನ ಸವಾರರಿಗೆ ಪೆಟ್ರೋಲ್ ಬೆಲೆಯಲ್ಲಿ 25 ರೂ. ಕಡಿತಗೊಳಿಸುವುದಾಗಿ ಬುಧವಾರ ಘೋಷಿಸಿದೆ. ಇದು ಜನವರಿ 26ರಿಂದ ಜಾರಿಗೆ ಬರಲಿದೆ.

ಉಳಿದಂತೆ ಎಲ್ಲೆಡೆ ಇಂಧನ ದರ ಸ್ಥಿರವಾಗಿದ್ದು, ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಂದು ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ.

ದೆಹಲಿಯಲ್ಲಿ ಲೀಟರ್ ಡೀಸೆಲ್ ದರ 86.67 ರೂ.
      ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 95.41 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.67 ರೂಪಾಯಿ ಇದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ.

ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.79 ರಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 89.79 ರೂಪಾಯಿ ನಿಗದಿಯಾಗಿದೆ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂ.

ರಾಜಸ್ಥಾನದ ಶ್ರೀಗಂಗಾನಗರದಲ್ಲಿ ಲೀಟರ್ ಪೆಟ್ರೋಲ್​ಗೆ 114.01 ರೂಪಾಯಿ ಹಾಗೂ ಲೀಟರ್ ಡೀಸೆಲ್​ಗೆ 98.39 ರೂಪಾಯಿ ದಾಖಲಾಗಿದೆ.

ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ಇದೆ. ಗುವಾಹಟಿಯಲ್ಲಿ ಲೀಟರ್ ಪೆಟ್ರೋಲ್ ದರ 94.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ. ಗುಜರಾತ್‌ನ್ ಗಾಂಧಿನಗರದಲ್ಲಿ ಲೀಟರ್ ಪೆಟ್ರೋಲ್ ದರ 95.35 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.33 ರೂಪಾಯಿ ನಿಗದಿಯಾಗಿದೆ.

ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್​ಗೆ 106.36 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 93.47 ರೂಪಾಯಿ ನಿಗದಿಯಾಗಿದೆ.

ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 95.28 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ. ಇನ್ನು ಕರ್ನಾಟಕದ ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ.

ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ದರ ಪರಿಷ್ಕರಣೆ

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಅಂತರರಾಷ್ಟ್ರೀಯ ಮಾನದಂಡಗಳ ಆಧಾರದಲ್ಲಿ ದರ ನಿಗದಿ

ಇದೀಗ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಮತ್ತೆ ಏರಿಕೆ ಕಾಣುತ್ತಿದೆ. ಆದರೂ, ರಾಷ್ಟ್ರಾದ್ಯಂತ ಮತ್ತೆ ಪೆಟ್ರೋಲ್​- ಡೀಸೆಲ್​ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ಇಂಧನ ದರ ಕಡಿಮೆಯಾದರೆ ವಾಹನ ಸವಾರರಿಗೆ ಮತ್ತಷ್ಟು ಭಾರ ಕಡಿಮೆಯಾಗಲಿದೆ. ಕಳೆದ ವಾರ ಯುಎಸ್​ನ ಬೆಂಚ್​​ಮಾರ್ಕ್​ ಡಬ್ಲ್ಯೂಟಿಐ ಕಚ್ಚಾತೈಲದ ಬೆಲೆ ಪ್ರತಿ ಬ್ಯಾರಲ್​​ಗೆ 70 ಡಾಲರ್​ಗಳಷ್ಟು ಕುಸಿದಿತ್ತು.

ಹಾಗೆಯೇ, ಬ್ರೆಂಟ್​ ಕಚ್ಚಾತೈಲದ ದರ ಪ್ರತಿ ಬ್ಯಾರೆಲ್​​ಗೆ 72 ರೂ. ಕಡಿಮೆಯಾಗಿತ್ತು. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link