ಶಾಸಕ ಡಿ ಸಿ ಗೌರಿಶಂಕರ್‌ ಗೆ ಬಿಗ್‌ ರಿಲೀಫ್….!

ತುಮಕೂರು: 

    ಗ್ರಾಮಾಂತರ ಕ್ಷೇತ್ರದ ಶಾಸಕ ಗೌರಿಶಂಕರ್​ ಅವರನ್ನು ಹೈಕೋರ್ಟ್​ ಏಕಸದಸ್ಯ ಪೀಠ ಅನರ್ಹಗೊಳಿಸಿ ಆದೇಶ ಹೊರಡಿಸಿತ್ತು. ಆದರೆ ಶಾಸಕ ಗೌರಿಶಂಕರ್​ ಪರ ವಕೀಲರು ಒಂದು ತಿಂಗಳ ಕಾಲ ಆದೇಶಕ್ಕೆ ತಡೆ ನೀಡುವಂತೆ ಕೋರ್ಟ್​ಗೆ ಮನವಿ ಮಾಡಿದರು. ಹೀಗಾಗಿ ಕೋರ್ಟ್​ ಒಂದು ತಿಂಗಳ ಕಾಲ ಆದೇಶಕ್ಕೆ ತಡೆ ನೀಡಿದೆ.

    ಹೈಕೋರ್ಟ್​ ನೀಡಿದ ಒಂದು ತಿಂಗಳ ಅವಧಿಯಲ್ಲಿ ಗೌರಿಶಂಕರ್​ ಅವರು ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿ ಈಗ ಹೈಕೋರ್ಟ್​ ನೀಡಿರುವ ತೀರ್ಪಿಗೆ ತಡೆ ಪಡೆಯಬೇಕು. ತಡೆ ಪಡೆದರೆ ಮಾತ್ರ ಹಾಲಿ ಶಾಸಕರು ಸೇಫ್​ ಆಗುತ್ತಾರೆ. ಇಲ್ಲವಾದರೆ ಅನರ್ಹ ಭೀತಿ ಎದುರಾಗುತ್ತದೆ.

     ಗೌರಿಶಂಕರ್‌ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಕೋರಿ ಪರಾಜಿತ ಬಿಜೆಪಿ ಅಭ್ಯರ್ಥಿ ಬಿ.ಸುರೇಶ್ ಗೌಡ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು. ಸುರೇಶ್ ಗೌಡರ ಪರ ಹಿರಿಯ ವಕೀಲೆ ನಳಿನಾ ಮಾಯೇಗೌಡ ಸುದೀರ್ಘ ವಾದ ಮಂಡಿಸಿದ್ದರು. ತೀರ್ಪು ಹೊರಬೀಳುತ್ತಲೇ, ಗೌರಿಶಂಕರ್ ಪರ ವಕೀಲ ಆರ್. ಹೇಮಂತ ರಾಜ್‌, ವಿಧಾನಸಭೆಗೆ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ತೀರ್ಪಿಗೆ ತಡೆ ನೀಡಬೇಕು” ಎಂದು ಕೋರಿ ಮಧ್ಯಂತರ ಅರ್ಜಿ ಸಲ್ಲಿಸಿದರು.

 

     2018ರ ಚುನಾವಣೆ ಸಂದರ್ಭ ಡಿ.ಸಿ ಗೌರಿಶಂಕರ್  ಅವರು 32 ಸಾವಿರ ವಯಸ್ಕರು ಹಾಗೂ 16 ಸಾವಿರ ಮಕ್ಕಳಿಗೆ ನಕಲಿ ವಿಮಾ ಪಾಲಿಸಿ ಬಾಂಡ್ ವಿತರಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಸಂಬಂಧ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ ಬಿಜೆಪಿಯ ಪರಾಜಿತ ಅಭ್ಯರ್ಥಿ ಸುರೇಶ್ ಗೌಡ ಅವರು, ನಕಲಿ ಬಾಂಡ್ ಆಮಿಷ ಒಡ್ಡಿ ಗೌರಿಶಂಕರ್ ಅಕ್ರಮವಾಗಿ ಚುನಾವಣೆಯನ್ನು ಗೆದ್ದಿದ್ದಾರೆ. ಆದ್ದರಿಂದ ಅವರ ಶಾಸಕ ಸ್ಥಾನವನ್ನು ಅಸಿಂಧುಗೊಳಿಸುವಂತೆ ಮನವಿ ಮಾಡಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ