ಬೆಂಗಳೂರು:
ಕರ್ನಾಟಕದಲ್ಲಿ 2028ರಲ್ಲಿ ನಡೆಯಲಿರುವ ಮುಂದಿನ ವಿಧಾನಸಭೆಯಲ್ಲಿ ಕಾಂಗ್ರೆಸ್‌ನ್ನು ಮತ್ತೆ ಅಧಿಕಾರಕ್ಕೆ ತರುವುದಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶುಕ್ರವಾರ ಪಣತೊಟ್ಟಿದ್ದಾರೆ.
ಗುರುವಾರ ತಡರಾತ್ರಿ ಪಕ್ಷದ ಒಕ್ಕಲಿಗ ಮುಖಂಡರೊಂದಿಗೆ ನಡೆಸಿದ ಸಭೆಯ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ನಾವು ಸೋಲನ್ನು ಒಪ್ಪಿಕೊಂಡಿದ್ದೇವೆ, ಆದರೆ ಅದು ಶಾಶ್ವತವಲ್ಲ. ರಾಜಕೀಯದಲ್ಲಿ ವಿಷಯಗಳು ಕ್ರಿಯಾತ್ಮಕವಾಗಿವೆ. 2019 ರಲ್ಲಿ ನಾವು ಕೇವಲ ಒಂದು ಸ್ಥಾನವನ್ನು ಗೆದ್ದಿದ್ದೆವು. ಆದರೆ ನಾವು ಈ ಬಾರಿ ಒಂಬತ್ತು ಸ್ಥಾನಗಳನ್ನು ಗೆದ್ದಿದ್ದೇವೆ. 2028ರಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ತರುವುದು ನನ್ನ ಜವಾಬ್ದಾರಿ ಎಂದು ಹೇಳಿದರು.
ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ವಿರುದ್ಧ ಕಾಂಗ್ರೆಸ್ ಸರ್ಕಾರ ಸೇಡಿನ ರಾಜಕೀಯ ನಡೆಸುತ್ತಿದೆ ಎಂಬ ಬಿಜೆಪಿ ಆರೋಪವನ್ನು ಶಿವಕುಮಾರ್ ನಿರಾಕರಿಸಿದ್ದಾರೆ.