ಸ್ವಾಮೀಜಿ ನನ್ನ ಮೇಲಿನ ಆಭಿಮಾನದಿಂದ ಹೇಳಿದ್ದಾರೆ : ಡಿ ಕೆ ಶಿವಕುಮಾರ್‌

ನವದೆಹಲಿ: 

    ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ಅವರ ಹೇಳಿಕೆಗೆ ಸ್ವತಃ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರೇ ದೆಹಲಿಯಲ್ಲಿ​​ ಪ್ರತಿಕ್ರಿಯಿಸಿದ್ದು, ಅವರು ಅಭಿಮಾನದಿಂದ ಹಾಗೆ ಹೇಳಿದ್ದಾರೆ. ನಾವು ಅದನ್ನು ನಾವು ಸೀರಿಯಸ್​ ಆಗಿ ತೆಗೆದುಕೊಳ್ಳುವುದಿಲ್ಲ ಎಂದು ಗುರುವಾರ ಸ್ಪಷ್ಟಪಡಿಸಿದ್ದಾರೆ.

   ಇಂದು ನಾಡಪ್ರಭು ಕೆಂಪೇಗೌಡ ಜಯಂತಿ ಹಿನ್ನೆಲೆಯಲ್ಲಿ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ಅವರು, ರಾಜ್ಯದಲ್ಲಿ ಹಲವರು ಮುಖ್ಯಮಂತ್ರಿಗಳಾಗಿದ್ದಾರೆ. ಆದರೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಮಾತ್ರ ಇನ್ನೂ ಆ ಭಾಗ್ಯ ಸಿಕ್ಕಿಲ್ಲ. ಹಾಗಾಗಿ ಸಿಎಂ ಸಿದ್ದರಾಮಯ್ಯನವರೇ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂದು ಮನವಿ ಮಾಡಿದರು.

   ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಅವರು, ಸಿಎಂ ಸ್ಥಾನದ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತೆ ಸ್ವಾಮೀಜಿ ಅವರಲ್ಲ ಎಂದು ಗರಂ ಆದರು.

    ಇನ್ನು ದೆಹಲಿಯಲ್ಲಿ ಸ್ವಾಮೀಜಿ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್ ಅವರು, ಸ್ವಾಮೀಜಿಯವರು ಅಭಿಮಾನದಿಂದ ಹಾಗೇ ಹೇಳಿದ್ದಾರೆ. ಅದನ್ನು ನಾವು ಸೀರಿಯಸ್​ ಆಗಿ ತಗೊಳೋದಿಲ್ಲ. ಪಕ್ಷದ ನಿರ್ಧಾರಕ್ಕೆ ಬದ್ಧರಾಗಿದ್ದೇವೆ ಎಂದು ತಿಳಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap