ಬೆಂಗಳೂರು:
ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಅರಮನೆ ಮೈದಾನದ ಸುತ್ತಮುತ್ತ ಸೇರಿದಂತೆ ನಗರದಲ್ಲಿ ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್ ಹಾಕಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬಿಬಿಎಂಪಿಗೆ ಸೂಚನೆ ನೀಡಿದ್ದಾರೆ.
ಮಾರ್ಚ್ 17 ರಂದು ಸೋಮವಾರ ಅರಮನೆ ಮೈದಾನದಲ್ಲಿ (ಸೋಮವಾರ) ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಹಾಕಿರುವ ಅನಧಿಕೃತ ಫ್ಲೆಕ್ಸ್, ಬ್ಯಾನರ್‌ಗಳನ್ನ ಕೂಡಲೇ ತೆರವುಗೊಳಿಸಬೇಕು ಎಂದು ಬಿಬಿಎಂಪಿ ಆಯುಕ್ತರಿಗೆ ಸೂಚನೆ ನೀಡಿದರು.
ಅನಧಿಕೃತವಾಗಿ ಬ್ಯಾನರ್, ಫ್ಲೆಕ್ಸ್ ಹಾಕಿರುವವರು ತಾವಾಗಿಯೇ ತೆಗೆಯಬೇಕು, ಒಂದೊಮ್ಮೆ ತೆರವು ಮಾಡದಿದ್ದರೆ ಸಂಬಂಧಪಟ್ಟವರ ವಿರುದ್ಧ ದಂಡ ಸೇರಿದಂತೆ ಕಟ್ಟುನಿಟ್ಟಿನ ಕ್ರಮ ಜರುಗಿಸುವಂತೆ ಆದೇಶಿಸಿದ್ದೇನೆ. ಯುವ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಬಲವನ್ನು ಬೂತ್ ಗಳಲ್ಲಿ ಪ್ರದರ್ಶಿಸಬೇಕೇ ಹೊರತು, ಈ ರೀತಿ ಬ್ಯಾನರ್, ಫ್ಲೆಕ್ಸ್ ಹಾಕಿಸಿ ಅಲ್ಲ ಎಂಗು ಹೇಳಿದರು.ಒಂದೊಮ್ಮೆ ತೆರವು ಮಾಡದಿದ್ದರೆ ಸಂಬಂಧಪಟ್ಟವರ ವಿರುದ್ಧ ದಂಡ ಸೇರಿದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ ಎಂದು ಸೂಚನೆ ನೀಡಿದರು.
ಬೆಂಗಳೂರು ನಗರದ ಸೌಂದರ್ಯವನ್ನು ಹಾಳು ಮಾಡಬಾರದು ಎಂದು ಅನಧಿಕೃತ ಫ್ಲೆಕ್ಸ್, ಬ್ಯಾನರ್ ಗಳನ್ನು ನಿಷೇಧಿಸಲಾಗಿದೆ. ಸರ್ಕಾರದ ಈ ಆದೇಶವನ್ನು ಪದೇ ಪದೆ ನಿರ್ಲಕ್ಷಿಸಲಾಗಿದೆ. ಈ ಆದೇಶ ಉಲ್ಲಂಘಿಸಿರುವವರು ನಮ್ಮ ಪಕ್ಷದವರಾದರೂ ಸರಿ, ಬೇರೆ ಪಕ್ಷದವರಾದರೂ ಸರಿ ಅಂತಹವರ ವಿರುದ್ಧ ಮುಲಾಜಿಲ್ಲದೇ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು
