ಬೆಂಗಳೂರು:
ಹೊಸಕೋಟೆಯಲ್ಲಿ ಶರತ್ ಬಚ್ಚೆಗೌಡಗೆ ಬೆಂಬಲ ನೀಡುವುದಾಗಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಯವರು ಹೇಳಿದ್ದಾರೆ.
ಇಂದು ನಗರದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, ಹೊಸಕೋಟೆಯಲ್ಲಿ ಪಕ್ಷೇತರರಾಗಿ ಕಣಕ್ಕೆ ಇಳಿಯುವ ಶರತ್ ಬಚ್ಚೆಗೌಡರಿಗೆ ಬೆಂಬಲ ನೀಡುವುದಾಗಿ ಹೇಳಿದರು.
ಈ ಮೊದಲು ಎಲ್ಲ 15 ಕ್ಷೇತ್ರಗಳಲ್ಲಿಯೂ ಅಭ್ಯರ್ಥಿಗಳನ್ನು ಇಳಿಸುವುದಾಗಿ ಹೇಳಿಕೊಂಡಿದ್ದ ಜೆಡಿಎಸ್, ಹೊಸಕೋಟೆ ಉಪ ಚುನಾವಣೆಯ ವಿಚಾರದಲ್ಲಿ ತನ್ನ ನಿಲುವು ಬದಲಿಸಿದೆ. ಇಲ್ಲಿ ಅಭ್ಯರ್ಥಿಯನ್ನು ಇಳಿಸುವ ಬದಲು ಪಕ್ಷೇತರ ಅಭ್ಯರ್ಥಿಗೆ ಬೆಂಬಲ ನೀಡುವ ಬಗ್ಗೆ ಆಲೋಚನೆ ಮಾಡುತ್ತಿದೆ. ಹೊಸಕೋಟೆಯಲ್ಲಿ ಪಕ್ಷೇತರ ಅಭ್ಯರ್ಥಿಗೆ ನಮ್ಮ ಅಗತ್ಯವಿದ್ದರೆ ಬೆಂಬಲ ನೀಡುತ್ತೇವೆ ಎಂದು ಎಚ್.ಡಿ.ಕುಮಾರಸ್ವಾಮಿ ಬುಧವಾರ ತಿಳಿಸಿದರು
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ