ರೋಹಿಣಿ ಸಿಂಧೂರಿ ಮನೆ ಫೋಟೊ ಬಿಡುಗಡೆ ಮಾಡಿದ ಡಿ. ರೂಪ

ಬೆಂಗಳೂರು: 

     ಸಾಮಾಜಿಕ ಜಾಲತಾಣದಲ್ಲಿ ರೋಹಿಣಿ ಸಿಂಧೂರಿಗೆ ಸಂಬಂಧಿಸಿದ ವೈಯಕ್ತಿಕ ಫೋಟೋಗಳನ್ನು ಬಿಡುಗಡೆ ಮಾಡಿದಾಗಿನಿಂದ  ಆರಂಭಿಸಿ ಸರ್ಕಾರದ ಮಟ್ಟದವರೆಗೆ ದೂರು ಹೋಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ, ಮುಖ್ಯಮಂತ್ರಿ, ಗೃಹ ಸಚಿವರಾದಿಯಾಗಿ ಹಲವರಿಂದ ಛೀಮಾರಿ ಹಾಕಿಸಿಕೊಂಡು ಬಹಿರಂಗವಾಗಿ ಹೇಳಿಕೆ ನೀಡದಂತೆ ಎಚ್ಚರಿಕೆ ನೀಡಿದರೂ ಸಹ IPS ಅಧಿಕಾರಿ ರೂಪಾ ಅವರ ಆರೋಪಗಳು  ಇನ್ನೂ ನಿಂತಿಲ್ಲ.

      ರೋಹಿಣಿ ಸಿಂಧೂರಿಯವರ ಮೇಲೆ ಬೆಂಗಳೂರಿನ ಜಾಲಹಳ್ಳಿಯಲ್ಲಿ ಕೋಟಿ ರೂಪಾಯಿಗಳ ಬಂಗಲೆಯನ್ನು ನಿರ್ಮಿಸುತ್ತಿದ್ದು, ಅದಕ್ಕೆ ಪೂರೈಕೆಯಾಗುತ್ತಿರುವ ವಸ್ತುಗಳು, ಮನೆ ನಿರ್ಮಾಣಕ್ಕೆ ಮಾಡುತ್ತಿರುವ ಖರ್ಚುಗಳ ಬಗ್ಗೆ ಪ್ರಶ್ನೆ ಮಾಡಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ದೂರು ಸಲ್ಲಿಸಿದ್ದ ಐಪಿಎಸ್ ಅಧಿಕಾರಿ ರೂಪಾ ಇಂದು ಜಾಲಹಳ್ಳಿಯಲ್ಲಿ ನಿರ್ಮಾಣವಾಗುತ್ತಿರುವ ಮನೆ, ಅದರ ನಕ್ಷೆ, ವಾಸ್ತು, ಕೊಠಡಿಗಳ ಫೋಟೋಗಳನ್ನು ಬಿಡುಗಡೆ ಮಾಡಿದ್ದಾರೆ. 

       ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ  ವಿರುದ್ಧ ಐಷಾರಾಮಿ ಬಂಗಲೋ ನಿರ್ಮಾಣ ಆರೋಪ ಕೇಳಿಬಂದಿದೆ. ಐಪಿಎಸ್ ಅಧಿಕಾರಿ ಡಿ.ರೂಪಾ ಮಾಡಿರುವ ಆರೋಪಗಳಲ್ಲಿ‌ ಒಂದಾಗಿರುವ ಬಂಗಲೆ 4,800 ಅಡಿ ವಿಸ್ತೀರ್ಣದ ಜಾಗದಲ್ಲಿ ಭವ್ಯವಾಗಿ ನಿರ್ಮಾಣವಾಗುತ್ತಿದೆ. ಯಲಹಂಕದ ನಿಟ್ಟೆ ಮೀನಾಕ್ಷಿ ಕಾಲೇಜು ರಸ್ತೆಯಲ್ಲಿರುವ ಸೆಂಚುರಿ ಅರ್ಟಿಜನ್ ಲೇಔಟ್ ನಲ್ಲಿ ನಿವೇಶನದಲ್ಲಿ ನಿರ್ಮಾಣವಾಗುತ್ತಿದ್ದು, ಇಟಾಲಿಯನ್ ಫರ್ನಿಚರ್ ಗಳನ್ನು 1ರಿಂದ 2 ಕೋಟಿ ವೆಚ್ಚದಲ್ಲಿ ನಿರ್ಮಿಸುತ್ತಿದ್ದು, ಸುಮಾರು 6 ಲಕ್ಷ ರೂಪಾಯಿ ಬೆಲೆ ಬಾಳುವ ಕಿಟಕಿ-ಬಾಗಿಲುಗಳನ್ನು ಹಾಕುತ್ತಿದ್ದಾರೆ. 26 ಲಕ್ಷ ಖರ್ಚು ಮಾಡಿ ಜರ್ಮನ್ ಮೇಡ್ ಪೀಠೋಪಕರಣಗಳನ್ನು ತರಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap