ಚಿತ್ರದುರ್ಗ
2023ರ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳಿಂದ ಆಶ್ವಾಸನೆ ಭರವಸೆಗಳ ಮಹಾಪೂರವೇ ಹರಿದು ಬರುತ್ತಿದ್ದರೆ, ಮತ್ತೊಂದೆಡೆ ಆರೋಪ, ಪ್ರತ್ಯಾ ರೋಪಗಳು ಕೂಡ ಕೇಳಿ ಬರುತ್ತಿವೆ. ಹಿರಿಯೂರು ಬಿಜೆಪಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಅವರಿಗೆ ಕಾಡುಗೊಲ್ಲರು ಮತ ನೀಡಬೇಡಿ ಎಂದು ಮಾಜಿ ಸಚಿವ ಡಿ.ಸುಧಾಕರ್ ಹೇಳಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಜಿಲ್ಲೆಯ ಹಿರಿಯೂರು ತಾಲೂಕಿನ ಮ್ಯಾಕ್ಲೂರಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ ಮಾಜಿ ಸಚಿವ ಡಿ.ಸುಧಾಕರ್ ಅಲ್ಲಿನ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ್ದು, ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಅವರು ಬುಡಕಟ್ಟು ಕಾಡುಗೊಲ್ಲ ಸಮುದಾಯದವರಲ್ಲ. ಅವರು ಊರುಗೊಲ್ಲರು ಮುಂದುವರಿದ ಸಮಾಜದವರು. ಶೋಶಿತರಲ್ಲ ಎಂದಿದ್ದಾರೆ.
ಕಾಡುಗೊಲ್ಲರು ನಿಜವಾದ ಶೋಷಿತರು. ನೀವು ಊರುಗೊಲ್ಲರಿಗೆ ಮತ ಹಾಕುವುದು ಒಂದೇ ಕ್ಲೋಸ್ ಆಗುವುದು ಒಂದೇ ಎಂದ ಡಿ.ಸುಧಾಕರ್ ಇಲ್ಲಿನ ಕಾಡುಗೊಲ್ಲರು ನಿಜವಾದ ಹಿಂದುಳಿ ದವರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ನೂರಕ್ಕೆ ನೂರರಷ್ಟು ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮಾಜಿ ಸಚಿವ ಡಿ ಸುಧಾಕರ್ ಭರವಸೆ ನೀಡಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ