ಬೆಂಗಳೂರು:
ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ 2025 ಇಂದು ಪ್ರಕಟವಾಗಿದೆ.ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿದ್ದು ಅವರು ಫಲಿತಾಂಶ ಪ್ರಕಟಿಸಿಲಿದ್ದಾರೆ.
ಈ ಭಾರಿ 625ಕ್ಕೆ 625 ಅಂಕಗಳನ್ನು 22 ವಿಧ್ಯಾರ್ಥಿಗಳು ಪಡೆದಿದ್ದು, SSLC ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನದಲ್ಲಿ ಇದ್ದು, ದ್ವೀತಿಯ ಸ್ಥಾನದಲ್ಲಿ ಉಡುಪಿ ಜಿಲ್ಲೆ ಇದೆ, ಇನ್ನು ವಿದ್ಯಾರ್ಥಿಗಳು ಮಂಡಳಿಯ ಅಧಿಕೃತ ವೆಬ್‌ಸೈಟ್ ಮೂಲಕ ಮಧ್ಯಾಹ್ನ 12.30ರ ಬಳಿಕ https://karresults.nic.in ನಲ್ಲಿ ಫಲಿತಾಂಶ ವೀಕ್ಷಿಸಬಹುದು.ಮಾರ್ಚ್, ಏಪ್ರಿಲ್ ತಿಂಗಳಲ್ಲಿ ನಡೆದಿದ್ದ ಪರೀಕ್ಷೆಗೆ 8,96,447 ವಿದ್ಯಾರ್ಥಿಗಳು ಹಾಜರಾಗಿದ್ದರು. 15,881 ಶಾಲೆಗಳ ವಿದ್ಯಾರ್ಥಿಗಳು 2,818 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದರು.
