ವಿವಾದ ಹುಟ್ಟಿಸಿದ ಶಿವಸೇನಾ ಶಾಸಕ ಸಂಜಯ್ ಗಾಯಕ್ವಾಡ್ ಹೇಳಿಕೆ….!

ಮುಂಬೈ: 

   ಮೀಸಲಾತಿ ರದ್ದುಪಡಿಸುವ ಕುರಿತು ಹೇಳಿಕೆ ನೀಡಿರುವ ಲೋಕಸಭಾ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ನಾಲಿಗೆಯನ್ನು ಕತ್ತರಿಸುವವರಿಗೆ 11 ಲಕ್ಷ ರೂಪಾಯಿ ನೀಡುವುದಾಗಿ ಶಿವಸೇನಾ ಶಾಸಕ ಸಂಜಯ್ ಗಾಯಕ್ವಾಡ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

   ಈ ಮಧ್ಯೆ ಗಾಯಕ್ವಾಡ್ ಅವರ ಹೇಳಿಕೆಯನ್ನು ಬೆಂಬಲಿಸುವುದಿಲ್ಲ ಎಂದು ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಚಂದ್ರಶೇಖರ ಬಾವಂಕುಲೆ ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ಶಿವಸೇನೆ ನೇತೃತ್ವದ ಸರ್ಕಾರದಲ್ಲಿ ಬಿಜೆಪಿಯೂ ಮೈತ್ರಿಪಕ್ಷವಾಗಿದೆ.ರಾಹುಲ್ ಗಾಂಧಿ ವಿದೇಶ ಪ್ರವಾಸದಲ್ಲಿದ್ದಾಗ ಭಾರತದಲ್ಲಿನ ಮೀಸಲಾತಿ ವ್ಯವಸ್ಥೆಯನ್ನು ರದ್ದುಗೊಳಿಸಲು ಬಯಸುವುದಾಗಿ ಹೇಳಿದ್ದರು. ಇದು ಕಾಂಗ್ರೆಸ್‌ನ ನಿಜವಾದ ಮುಖವನ್ನು ಅನಾವರಣಗೊಳಿಸಿದೆ ಎಂದು ಗಾಯಕ್ವಾಡ್ ವಿಚಿತ್ರ ರೀತಿಯ ಬಹುಮಾನ ಘೋಷಿಸುವ ಮೊದಲು ಸುದ್ದಿಗಾರರಿಗೆ ತಿಳಿಸಿದರು.

   ವಿದರ್ಭ ಪ್ರದೇಶದ ಬುಲ್ಧಾನ ವಿಧಾನಸಭಾ ಕ್ಷೇತ್ರದ ಶಾಸಕ ಗಾಯಕ್‌ವಾಡ್‌ಗೆ ವಿವಾದಗಳು ಹೊಸದೇನಲ್ಲ. ಕಳೆದ ತಿಂಗಳು ಪೊಲೀಸರು ಶಿವಸೇನೆ ಶಾಸಕರ ಕಾರನ್ನು ತೊಳೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ನಂತರ ಕಾರಿನಲ್ಲಿ ಪೊಲೀಸರು ವಾಂತಿ ಮಾಡಿಕೊಂಡ ನಂತರ ಸ್ವಯಂಪ್ರೇರಣೆಯಿಂದ ಸ್ವಚ್ಛಗೊಳಿಸಿದರು ಎಂದು ಗಾಯಕ್ವಾಡ್ ಸಮರ್ಥಿಸಿಕೊಂಡಿದ್ದರು. 

   1987 ರಲ್ಲಿ ಹುಲಿಯೊಂದನ್ನು ಬೇಟೆಯಾಡಿ ಅದರ ಹಲ್ಲನ್ನು ತನ್ನ ಕುತ್ತಿಗೆಗೆ ಹಾಕಿಕೊಂಡಿರುವುದಾಗಿ ಗಾಯಕ್ವಾಡ್ ಫೆಬ್ರವರಿಯಲ್ಲಿ ಹೇಳಿದ್ದರು. ಕೂಡಲೇ ಕಾರ್ಯಪ್ರವೃತ್ತರಾದ ಅರಣ್ಯ ಇಲಾಖೆ ಅದರ ಗುರುತು ಪತ್ತೆ ಹಚ್ಚಲು ಹುಲಿ ಹಲ್ಲನ್ನು ವಿಧಿ ವಿಜ್ಞಾನ ಪ್ರಯೋಗಾಲಕ್ಕೆ ಕಳುಹಿಸಿತ್ತು. ಮತ್ತು ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಗಾಯಕ್ವಾಡ್ ವಿರುದ್ಧ ಆರೋಪ ಹೊರಿಸಿತ್ತು.

Recent Articles

spot_img

Related Stories

Share via
Copy link