ಚಿತ್ರದುರ್ಗ:
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ನಟ ದರ್ಶನ್ ಗೆ ಹೈಕೋರ್ಟ್ ಡಿ.13 ರಂದು ಜಾಮೀನು ಮಂಜೂರು ಮಾಡಿದೆ.ನೆಚ್ಚಿನ ನಟನಿಗೆ ಜಾಮೀನು ದೊರೆತಿರುವುದಕ್ಕೆ ಸೆಲಬ್ರಿಟಿಗಳಾದ ನಿರ್ದೇಶಕ ತರುಣ್ ಸುಧೀರ್ ಆದಿಯಾಗಿ ಅಭಿಮಾನಿಗಳು, ಹಿತೈಶಿಗಳು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.ಆದರೆ ಚಿತ್ರದುರ್ಗದಲ್ಲಿ ನಟ ದರ್ಶನ್ ಗೆ ಜಾಮೀನು ನೀಡುವುದಕ್ಕೆ ಕೆಲವೊಂದು ಪ್ರದೇಶದಲ್ಲಿ ತೀವ್ರ ಆಕ್ರೋಶ ಭುಗಿಲೆದ್ದಿದೆ.
ಚಿತ್ರದುರ್ಗ ನಗರದಲ್ಲಿ ದರ್ಶನ್ ವಿರುದ್ಧ ಪ್ರತಿಭಟನೆ ನಡೆಸಿರುವ ಸಾರ್ವಜನಿಕರು, ದರ್ಶನ್ ಫೋಟೋ ಇರುವ ಪ್ರತಿಕೃತಿಗಳಿಗೆ ಚಪ್ಪಲಿಯಿಂದ ಥಳಿಸಿ, ಬೆಂಕಿ ಹಚ್ಚುವ ಮೂಲಕ ಜಾಮಿನು ದೊರೆತಿದ್ದನ್ನು ವಿರೋಧಿಸಿದ್ದಾರೆ.
ಇದೇ ವೇಳೆ ದರ್ಶನ್ ನ್ನು ಗಲ್ಲಿಗೇರಿಸಿ ಎಂಬ ಘೋಷಣೆ ಕೂಗಿದ್ದಾರೆ. ಘಟನೆ ನಡೆದ 6 ತಿಂಗಳ ಬಳಿಕ ದರ್ಶನ್ ಗೆ ಜಾಮೀನು ಮಂಜೂರಾಗಿದೆ. ಇತ್ತೀಚೆಗೆ ದರ್ಶನ್ ಗೆ ಬೆನ್ನುನೋವು ಇದ್ದ ಕಾರಣ ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಿರುವ ಹಿನ್ನೆಲೆಯಲ್ಲಿ ವೈದ್ಯಕೀಯ ಕಾರಣಗಳಿಗಾಗಿ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿತ್ತು.








