ರೇಣುಕಾ ಸ್ವಾಮಿ ಪ್ರಕರಣ: ದರ್ಶನ್​ ಗೆ ಜಾಮೀನು

ಬೆಂಗಳೂರು :

    ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್​ಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ದರ್ಶನ್​ರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ದರ್ಶನ್, ಪವಿತ್ರಾ ಗೌಡ, ಪ್ರದೋಶ್, ಅನುಕುಮಾರ್, ನಾಗರಾಜು, ಲಕ್ಷ್ಮಣ್, ಜಗದೀಶ್ ಅವರಿಗೆ ಜಾಮೀನು ಮಂಜೂರು ಮಾಡಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜುಲೈ 11 ರಂದು ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದರು. ಪ್ರಸ್ತುತ ಅವರು ಅನಾರೋಗ್ಯದ ಕಾರಣ ನೀಡಿ ಹೈಕೋರ್ಟ್​ನಿಂದ ಮಧ್ಯಂತರ ಜಾಮೀನು ಪಡೆದಿದ್ದಾರೆ. ಈಗ ಅವರಿಗೆ ಜಾಮೀನು ಮಂಜೂರಾಗಿದ್ದು, ತಾತ್ಕಾಲಿಕ ನಿರಾಳತೆ ದೊರಕಿದೆ.

   ಇದೇ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ನಾಲ್ವರಿಗೆ ಈ ಹಿಂದೆಯೇ ಜಾಮೀನು ದೊರೆತಿತ್ತು, ಇಂದು ಏಳು ಮಂದಿಗೆ ಜಾಮೀನು ದೊರೆತಿದೆ. ಆ ಮೂಲಕ ಈ ಪ್ರಕರಣದ 11 ಆರೋಪಿಗಳಿಗೆ ಜಾಮೀನು ದೊರೆತಂತಾಗಿದೆ. ಜಾಮೀನಿನಿಂದ ದರ್ಶನ್​ಗೆ ನಿರಾಳತೆ ದೊರೆತಿದ್ದು, ಅವರ ಮೇಲೆ ಈಗ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಬೇಕಾದ ಒತ್ತಡವೂ ತೊಲಗಿದೆ. ಮಾತ್ರವಲ್ಲದೆ ನಿಂತಿರುವ ಸಿನಿಮಾಗಳ ಚಿತ್ರೀಕರಣಕ್ಕೂ ಅವರು ತೆರಳಬಹುದಾಗಿದೆ.
  ಅನಾರೋಗ್ಯದ ಕಾರಣ ನೀಡಿ ಈಗಾಗಲೇ ಮಧ್ಯಂತರ ಜಾಮೀನನ್ನ ದರ್ಶನ್ ಪಡೆದಿದ್ದಾರೆ. ಇನ್ನು ಇಂದು ಜಾಮೀನು ಪಡೆದ ಪ್ರಕರಣದ ಇತರೆ ಆರೋಪಿಗಳು ಸೋಮವಾರ ಜೈಲಿನಿಂದ ಬಿಡುಗಡೆ ಆಗಲಿದ್ದಾರೆ. ಪವಿತ್ರಾ ಗೌಡ ಸಹ ಸೋಮವಾರವೇ ಜೈಲಿನಿಂದ ಹೊರಬರಲಿದ್ದಾರೆ.

Recent Articles

spot_img

Related Stories

Share via
Copy link