ಬೆಂಗಳೂರು:
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ ಜಾಮೀನು ದೊರಕಿದೆ . ಸುಮಾರು ಐದು ತಿಂಗಳಿಂದಲೂ ಜೈಲಿನಲ್ಲಿದ್ದ ನಟನಿಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ಜಾಮೀನು ಕೊಟ್ಟಿದೆ. ಈ ಮೂಲಕ ನಟ ದರ್ಶನ್‌ಗೆ ದೀಪಾವಳಿ ಸಿಹಿ ದೊರಕಿದೆ. ದರ್ಶನ್ ಅವರ ಆರೋಗ್ಯದದ ಸಮಸ್ಯೆಯನ್ನು ಪರಿಗಣನೆಗೆ ತೆಗೆದುಕೊಂಡು ಆರು ವಾರಗಳ ಅವಧಿಯ ಮಧ್ಯಂತರ ಜಾಮೀನು ನೀಡಲಾಗಿದೆ. ಮಧ್ಯಂತರ ಜಾಮೀನಿಗೆ ಸಾಕಷ್ಟು ಪ್ರಮಾಣದ ಷರತ್ತುಗಳನ್ನು ನ್ಯಾಯಾಲಯ ವಿಧಿಸಿದೆ.
ವಿಚಾರಣಾ ನ್ಯಾಯಾಲದಯ್ಲಲಿ ದರ್ಶನ್ರ ಜಾಮೀನು ಅರ್ಜಿ ತಿರಸ್ಕೃತಗೊಂಡಿತ್ತು. ಹೀಗಾಗಿ ಅವರ ಅಭಿಮಾನಿಗಳಿಗೆ ಬೇಸರ ಮೂಡಿತ್ತು. ದರ್ಶನ್ ಪರ ವಕೀಲರಾದ ಸಿವಿ ನಾಗೇಶ್ ಹೈಕೋರ್ಟ್ನಲ್ಲಿ ಅರ್ಜಿ ಹಾಕಿದ್ದರು. ಈ ವೇಳೆ ಅವರ ಬೆನ್ನು ನೋವು ಸೇರಿದಂತೆ ಅನಾರೋಗ್ಯದ ಸಮಸ್ಯೆಯನ್ನೇ ಪ್ರಮುಖವಾಗಿ ಕೋರ್ಟ್ ಮುಂದೆ ಹೇಳಲಾಗಿತ್ತು. ಹೀಗಾಗಿ ಸಮಸ್ಯೆಯನ್ನು ಪ್ರಮುಖ ಕಾರಣವಾಗಿ ಪರಿಗಣಿಸಿ ಜಾಮೀನು ನೀಡುವಂತೆ ಮನವಿ ಮಾಡಲಾಗಿತ್ತು. ಬೆನ್ನುನೋವಿನ ಸಮಸ್ಯೆ ಇದ್ದು, ಶಸ್ತ್ರಚಿಕಿತ್ಸೆಯ ಅವಶ್ಯಕತೆ ಇದೆ. ಚಿಕಿತ್ಸೆ ತಡವಾದರೆ ಅವರು ಸ್ಟ್ರೋಕ್‌ಗೆ ಈಡಾಗುವ ಆತಂಕ ಇದೆ ಎಂದು ವೈದ್ಯರು ನೀಡಿದ್ದ ವರದಿಯನ್ನು ದರ್ಶನ್ ಪರ ವಕೀಲರು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರಸನ್ನ ಕುಮಾರ್ ಅವರು, ರ ಆರೋಗ್ಯ ಸಮಸ್ಯೆಯ ಪರಿಶೀಲನೆ ನಡೆಸಲು ವೈದ್ಯಕೀಯ ಮಂಡಳಿ ಸ್ಥಾಪನೆ ಮಾಡಬೇಕೆಂಬ ವಾದವನ್ನು ನ್ಯಾಯಾಲಯದ ಮುಂದೆ ಮಂಡಿಸಿದ್ದರು. ಈಗ ಸಲ್ಲಿಸಲಾಗಿರುವ ವೈದ್ಯ ವರದಿಯಲ್ಲಿ ದರ್ಶನ್‌ಗೆ ಆಗಬೇಕಿರುವ ಶಸ್ತ್ರಚಿಕಿತ್ಸೆ, ಗುಣವಾಗಲು ತೆಗೆದುಕೊಳ್ಳುವ ಸಮಯ ನಿಖರವಾಗಿಲ್ಲ ಎಂಬುದಾಗಿ ಕೋರ್ಟ್‌ಗೆ ಮನವರಿಕೆ ಮಾಡಿದ್ದರು.
ವಾದ ಆಲಿಸಿದ ನ್ಯಾಯಮೂರ್ತಿ ವಿಶ್ವೇಶ್ವರ ಭಟ್ ಅವರು, ‘ವೈದ್ಯಕೀಯ ನೆರವು ವಿಚಾರಣಾಧೀನ ಕೈದಿಯ ಹಕ್ಕು’ ಎಂದು ಉಲ್ಲೇಖಿಸಿ ಇದೀಗ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದಾರೆ. ಆರು ವಾರಗಳ ಮಧ್ಯಂತರ ಜಾಮೀನು ಇದಾಗಿದ್ದು, ಚಿಕಿತ್ಸೆ ಕಾರಣಕ್ಕಾಗಿ ಜಾಮೀನು ನೀಡಲಾಗಿದೆ.
