ಮೈಸೂರು:
ಮೈಸೂರು ದಸರಾ ಸಂಭ್ರಮದ ನಡುವೆಯೇ ಚಾಮುಂಡಿ ಬೆಟ್ಟದಲ್ಲಿ ಸೂತಕ ಛಾಯೆ ಆವರಿಸಿದೆ. ಚಾಮುಂಡಿ ಬೆಟ್ಟದ ಶಿವಾರ್ಚಕರು ಇಹಲೋಕ ತ್ಯಜಿಸಿದ್ದಾರೆ. ಶಿವಾರ್ಚಕರ ನಿಧನದ ಹಿನ್ನೆಲೆಯಲ್ಲಿ ಶ್ರೀ ಚಾಮುಂಡೇಶ್ವರಿ ತಾಯಿಯ ದರ್ಶನಕ್ಕೆ ನಿರ್ಬಂಧ ಹೇರಲಾಗಿದೆ. ಇಂದು ಬೆಳಿಗ್ಗೆಯಿಂದ ಮಧ್ಯಾಹ್ನದ ವರೆಗೂ ದೇವಿಕ್ಕೆ ಸಾರ್ವಜನಿಕರಿಗೆ ಅವಕಾಶವಿಲ್ಲ.
ತಡರಾತ್ರಿ ಚಾಮುಂಡಿ ಬೆಟ್ಟದ ಶಿವಾರ್ಚಕ ನಿಧನ ಹಿನ್ನಲೆ ಇಂದು ಬೆಳಿಗ್ಗೆಯಿಂದ ಮಧ್ಯಾಹ್ನದ ವರೆಗೂ ದೇವಿ ದರ್ಶನ ಬಂದ್ ಮಾಡಲಾಗಿದೆ. ಮಧ್ಯಾಹ್ನ ಸಂಸ್ಕಾರ ಮುಗಿದ ಬಳಿಕ ದೇವಿ ದರ್ಶನಕ್ಕೆ ಅವಕಾಶ ನೀಡಲಾಗುತ್ತೆ. ನವರಾತ್ರಿ ಹಿನ್ನೆಲೆ ಚಾಮುಂಡಿ ಬೆಟ್ಟಕ್ಕೆ ಭಕ್ತ ಸಾಗರವೇ ಹರಿದು ಬರ್ತಿದೆ. ಇಂದು ದಿಢೀರ್ ದೇವಿ ದರ್ಶನಕ್ಕೆ ನಿರ್ಬಂಧ ಹಿನ್ನೆಲೆ ಸಾರ್ವಜನಿಕರಿಗೂ ತೊಂದರೆಯಾಗಲಿದೆ.
ಎರಡನೇ ದಿನ ಬ್ರಹ್ಮಚಾರಿಣಿ ಅಲಂಕಾರದಲ್ಲಿ ತಾಯಿ ಚಾಮುಂಡೇಶ್ವರಿ ಕಂಗೊಳಿಸುತ್ತಿದ್ದಾರೆ. ದೇವಿಗೆ ಮಧ್ಯಾಹ್ನದ ಬಳಿಕ ವಿಶೇಷ ಪೂಜೆ ಕೈಂಕಾರ್ಯ ನಡೆಯಲಿದೆ. ಅರಮನೆಯಲ್ಲಿ ಎರಡನೇ ದಿನದ ಖಾಸಗಿ ದರ್ಬಾರ್ ನಡೆಯುತ್ತಿದ್ದು, ಪಟ್ಟದ ಆನೆ ಪಟ್ಟದ ಕುದುರೆ ಪಟ್ಟದ ಹಸುಗಳಿಗೆ ಸಾಂಪ್ರದಾಯಿಕ ಪೂಜೆ ಸಲ್ಲಿಕೆ ಮಾಡಿದ್ದಾರೆ. ವಾದ್ಯಗೋಷ್ಠಿಯೊಂದಿಗೆ ಪೂಜೆ ಸಲ್ಲಿಸಿದ್ದು, ಅರಮನೆ ಅಂಗಳದಲ್ಲಿ ಪಟ್ಟದ ಆನೆ, ಕುದುರೆ, ಹಸುಗಳು, ಒಂದು ಸುತ್ತು ಸುತ್ತಿ ನಡೆದ ಅರಮನೆ ಅಂಗಳದಲ್ಲಿರುವ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಕೆ ಮಾಡಲಾಯ್ತು.
ದಸರಾ ಎರಡನೇ ದಿನವೂ ಹತ್ತು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 8 ಗಂಟೆಗೆ ಆರಮನೆ ಅಂಗಳದಲ್ಲಿ ರಂಗೋಲಿ ಸ್ಪರ್ಧೆ ನಡೆಯಲಿದೆ. ಮಹಿಳಾ ಮತ್ತು ಮಕ್ಕಳ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ರಂಗೋಲೆ ಸ್ಪರ್ಧೆ ಉದ್ಘಾಟಿಸಿದ್ದಾರೆ. ಬೆಳಗ್ಗೆ 10.30 ಪಂಚ ಕಾವ್ಯದೌತಣ ಪ್ರಭಾತ ಕವಿಗೋಷ್ಠಿ ನಡೆಯಲಿದ್ದು, ಖ್ಯಾತ ಸಾಹಿತಿ ಅರವಿಂದ ಮಾಲಗತ್ತಿ ಕವಿಗೋಷ್ಠಿ ಉದ್ಘಾಟಿಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಜೆಕೆ ಮೈದಾನದಲ್ಲಿ ನಡೆಯೋ ಮಹಿಳಾ ದಸರಾಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚಾಲನೆ ನೀಡಲಿದ್ದಾರೆ.
ಸಂಜೆ 7 ಗಂಟೆಗೆ ಯುವ ದಸರಾ ಉದ್ಘಾಟನೆ ಕಾರ್ಯಕ್ರಮ ನಡೆಯಲಿದ್ದು, ಯುವ ದಸರಾದಲ್ಲಿ ಸಂಗೀತ ನಿರ್ದೇಶಕ ಅರ್ಜನ್ ಜನ್ಯ ಲೈವ್ ಕಾನ್ಸರ್ಟ್ ಹಾಗೂ ಸ್ಯಾಂಡಲ್ ವುಡ್ ನೈಟ್ ಮತ್ತೊಂದೆಡೆ ಅರಮನೆಯಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಖಾಸಗಿ ದರ್ಬಾರ್ ನಡೆಯಲಿದೆ.








