ಬೆಂಗಳೂರು:
ದರ್ಶನ್ ಜಾಮೀನು ಅರ್ಜಿಯ ವಿಚಾರಣೆ ಹೈಕೋರ್ಟ್ನಲ್ಲಿ ನಡೆದಿದೆ. ದರ್ಶನ್ರ ಆರೋಗ್ಯ ಸಮಸ್ಯೆಯನ್ನು ಮುಂದು ಮಾಡಿ ಜಾಮೀನು ಕೇಳಲಾಗಿದೆ. ದರ್ಶನ್ಗೆ ಆರೋಗ್ಯ ಸಮಸ್ಯೆ ಇದ್ದು, ಅವರಿಗೆ ತುರ್ತಾಗಿ ಶಸ್ತ್ರಚಿಕಿತ್ಸೆಯ ಅವಶ್ಯಕತೆ ಇದೆ ಎಂದು ದರ್ಶನ್ ಪರ ವಕೀಲ ಸಿವಿ ನಾಗೇಶ್ ವಾದ ಮಂಡಿಸಿದ್ದಾರೆ. ಆದರೆ ಎಸ್ಪಿಪಿ ಅವರು ದರ್ಶನ್ ಜಾಮೀನು ಅರ್ಜಿಗೆ ಕೆಲ ತಕರಾರುಗಳನ್ನು ಎತ್ತಿದ್ದಾರೆ. ಇಬ್ಬರ ವಾದವನ್ನು ಆಲಿಸಿದ ಹೈಕೋರ್ಟ್ ನ್ಯಾಯಾಧೀಶರು ಆದೇಶವನ್ನು ಅಕ್ಟೋಬರ್ 30 ಕ್ಕೆ ಕಾಯ್ದಿರಿಸಲಾಗಿದೆ.