ಚಾಮುಂಡೇಶ್ವರಿ ಬೆಟ್ಟಕ್ಕೆ ತೆರಳಿ ದೇವಿಯ ಆಶೀರ್ವಾದ ಪಡೆದ ನಟ ದರ್ಶನ್‌

ಮೈಸೂರು :

    ಬಹು ನಿರೀಕ್ಷಿತ ಡೆವಿಲ್‌ ಸಿನಿಮಾದ ಚಿತ್ರೀಕರಣ ಬಹುತೇಕ ಪೂರ್ಣಗೊಳ್ಳುತ್ತಿದ್ದಂತೆ ನಟ ದರ್ಶನ್‌  ಮತ್ತೆ ಟೆಂಪಲ್‌ ರನ್‌ ಶುರು ಮಾಡಿದ್ದಾರೆ. ಇತ್ತೀಚೆಗೆಷ್ಟೇ ಕೇರಳದ ಕೊಟ್ಟಿಯೂರು ದೇವಸ್ಥಾನಕ್ಕೆ ಭೇಟಿ ನೀಡಿದ್ದ ದರ್ಶನ್‌ ಇದೀಗ ಹುಟ್ಟುರಾದ ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ ತೆರಳಿ ದೇವಿಯ ದರ್ಶನ ಪಡೆದಿದ್ದಾರೆ. ಆಷಾಡ ಮಾಸ ಹಿನ್ನೆಲೆಯಲ್ಲಿ ನಟ ದರ್ಶನ್ ಅವರು ತಮ್ಮ ಪತ್ನಿ ಜೊತೆಗೆ ಚಾಮುಂಡೇಶ್ವರಿ ದರ್ಶನ ಪಡೆದು ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ದರ್ಶನ್ ಜೊತೆಗಿನ ಸೆಲ್ಫಿಗಾಗಿ ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಸಿನಿಮಾ ಕೆಲಸಗಳಿಗೆ ಬ್ರೇಕ್ ನೀಡಿ ಸ್ನೇಹಿತರ ಜೊತೆ ಚಾಮುಂಡೇಶ್ವರಿ ದೇವಸ್ಥಾನಕ್ಕೆ ದರ್ಶನ್ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. 

    ಎರಡು ಹಾಡುಗಳ ಶೂಟಿಂಗ್‌ ಹೊರತುಪಡಿಸಿದರೆ ದರ್ಶನ್‌ ನಟನೆಯ ‘ದಿ ಡೆವಿಲ್‌’ ಸಿನಿಮಾದ ಉಳಿದ ಭಾಗಗಳ ಶೂಟಿಂಗ್‌ ಬಹುತೇಕ ಸಂಪೂರ್ಣವಾಗಿದೆ.ದರ್ಶನ್‌ ನಟನೆಯ ‘ದಿ ಡೆವಿಲ್‌’ ಸಿನಿಮಾದ ಉದಯಪುರ ಶೂಟಿಂಗ್‌ ಗ್ಲಿಂಪ್ಸ್‌ ಬಿಡುಗಡೆಯಾಗಿದೆ. ಇದರಲ್ಲಿ ದರ್ಶನ್‌ ಅವರ ನಟನೆಯ ತುಣುಕುಗಳೂ ಕಾಣಿಸಿಕೊಂಡಿವೆ.ಜೊತೆಗೆ ನಾಯಕಿ ರಚನಾ ರೈ, ಕಲಾವಿದರಾದ ಅಚ್ಯುತ ಕುಮಾರ್‌, ಶರ್ಮಿಳಾ ಮಾಂಡ್ರೆ, ಮಹೇಶ್‌ ಮಂಜ್ರೇಕರ್‌, ಚಂದನ್‌ ಗೌಡ ಅವರ ಲುಕ್‌ ರಿವೀಲ್‌ ಆಗಿದೆ. ಆದರೆ ದಸರಾ ಸಂದರ್ಭದಲ್ಲಿ ಸಿನಿಮಾ ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಚಿತ್ರತಂಡ ತಿಳಿಸಿದ್ದು, ಡಿಸೆಂಬರ್‌ನಲ್ಲಿ ಸಿನಿಮಾ ತೆರೆಗೆ ಬರುವ ಸಾಧ್ಯತೆ ಇದೆ.

Recent Articles

spot_img

Related Stories

Share via
Copy link