ಬೆಂಗಳೂರು:
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅರೆಸ್ಟ್ ಆಗಿದ್ದರೂ ಅವರ ಪತ್ನಿ ವಿಜಯಲಕ್ಷ್ಮಿ ಇದುವರೆಗೆ ಒಂದೇ ಒಂದು ಪ್ರತಿಕ್ರಿಯೆ ನೀಡಿಲ್ಲ. ಪವಿತ್ರಾ ಗೌಡ ವಿಚಾರದಲ್ಲಿ ಆಗಾಗ ಸೋಶಿಯಲ್ ಮೀಡಿಯಾಗಳ ಮೂಲಕ ಸಮರ ಸಾರುತ್ತಿದ್ದ ವಿಜಯಲಕ್ಷ್ಮಿ ಅವರು ಈ ಬಾರಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಈ ಘಟನೆ ಬಳಿಕ ವಿಜಯಲಕ್ಷ್ಮಿ ಅವರು ಎಲ್ಲಿಯೂ ಕಾಣಿಸಿಕೊಂಡಿಲ್ಲ. ಹೀಗಿರುವಾಗಲೇ ವಿಜಯಲಕ್ಷ್ಮಿ ಅವರು ಇನ್ಸ್ಟಾಗ್ರಾಮ್ ಪ್ರೊಫೈಲ್ ಫೋಟೊ ಡಿಲೀಟ್ ಮಾಡಿದ್ದಾರೆ. ಇಷ್ಟೇ ಅಲ್ಲ ನಟ ದರ್ಶನ್ ಅವರನ್ನು ಅನ್ ಫಾಲೋ ಮಾಡಿದ್ದಾರೆ.
ಪವಿತ್ರಾ ಗೌಡ ವಿಚಾರದಲ್ಲಿ ವಿಜಯಲಕ್ಷ್ಮಿ ಈ ಹಿಂದೆ ಸಾಕಷ್ಟು ಬಾರಿ ಸೋಷಿಯಲ್ ಮೀಡಿಯಾ ವಾರ್ ನಡೆಸಿದ್ದರು. ಪವಿತ್ರಾ ವಿರುದ್ಧ ನಾನಾ ರೀತಿಯ ಹೇಳಿಕೆಗಳನ್ನು ನೀಡಿದ್ದರು. ಕೆಲ ತಿಂಗಳ ಹಿಂದೆ ಪವಿತ್ರಾ ಗೌಡ ಅವರು ದರ್ಶನ್ ಜತೆ ಇರೋ ಫೋಟೋ ಹಂಚಿಕೊಂಡಿದ್ದರು. 10 ವರ್ಷಗಳ ಸಂಬಂಧ’ ಎಂದು ಟ್ಯಾಗ್ ಲೈನ್ ನೀಡಿದ್ದರು. ಇದನ್ನು ವಿಜಯಲಕ್ಷ್ಮಿ ಖಂಡಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ