ಯಾದಗಿರಿ:
ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರು ಡಿಕೆ ಶಿವಕುಮಾರ್ ಅವರ ಮಾತು ಕೇಳಿ ಸೆಕ್ಸ್ ವಿಡಿಯೋ ಮಾಡಿಕೊಂಡ್ರಾ? ಎಂದು ಸಚಿವ ಶರಣಬಸಪ್ಪ ದರ್ಶನಾಪುರ ಅವರು ಬುಧವಾರ ಜೆಡಿಎಸ್ – ಬಿಜೆಪಿ ನಾಯಕರನ್ನು ಪ್ರಶ್ನಿಸಿದ್ದಾರೆ.
ಪ್ರಜ್ವಲ್ ರೇವಣ್ಣ ಅವರು ನೂರಾರು ಮಹಿಳೆಯರ ಜತೆ ರಾಸಲೀಲೆ ನಡೆಸಿದ ವಿಡಿಯೋ ಇದ್ದ ಪೆನ್ಡ್ರೈವ್ ಬಿಡುಗಡೆಯ ಹಿಂದೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಕೈವಾಡವಿದೆ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯಿಸಿದ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಅವರು, “ಪ್ರಜ್ವಲ್ ರೇವಣ್ಣ ಅವರು ಡಿಕೆ ಶಿವಕುಮಾರ್ ಮಾತು ಕೇಳಿ ಸೆಕ್ಸ್ ವಿಡಿಯೋ ಮಾಡಿಕೊಂಡ್ರಾ? ಅಥವಾ ಡಿಕೆ ಶಿವಕುಮಾರ್ ಏನು ಎಲ್ಲ ಹೆಣ್ಣು ಮಕ್ಕಳ ಸೆಕ್ಸ್ ವಿಡಿಯೋ ಮಾಡಿಕೊ ಅಂತ ಹೇಳಿದ್ರಾ? ಅಥವಾ ಡಿಕೆ ಶಿವಕುಮಾರ್ ಅವರೇ ವಿಡಿಯೋ ಮಾಡಿದ್ರಾ?” ಎಂದು ಪ್ರಶ್ನಿಸಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ದರ್ಶನಾಪುರ ಅವರು, ಪ್ರಜ್ವಲ್ ರೇವಣ್ಣ ವಿಡಿಯೋ ರೆಕಾರ್ಡ್ ಮಾಡಿಕೊಂಡು ಈಗ ಬೇರೆಯವರ ಮೇಲೆ ಹಾಕುತ್ತಿದ್ದಾರೆ. ಈ ವಿಡಿಯೋ ಬಿಡುಗಡೆ ಮಾಡಿದವರು ಯಾರು? ಎಷ್ಟು ಹೆಣ್ಣು ಮಕ್ಕಳ ವಿಡಿಯೋ ಮಾಡಿದ್ದಾರೆ? ನೇಹಾ ಹಿರೇಮಠ ಕೊಲೆಯಾದಾಗ ಬಿಜೆಪಿ ಮತ್ತು ಜೆಡಿಎಸ್ನವರು ಆರೋಪಿಯನ್ನು ಎನ್ಕೌಂಟರ್ ಮಾಡಬೇಕು ಎಂದರು. ಈಗ ಬಿಜೆಪಿ, ಜೆಡಿಎಸ್ನವರು ಎಲ್ಲಿದ್ದಾರೆ? ಪ್ರಜ್ವಲ್ನನ್ನು ಎನ್ಕೌಂಟರ್ ಮಾಡಿ ಅಂತ ಯಾಕೆ ಹೇಳುತ್ತಿಲ್ಲ? ಸಾಮಾನ್ಯ ಜನರಿಗೆ ಒಂದು ನ್ಯಾಯ, ದೊಡ್ಡವರಿಗೆ ಒಂದು ನ್ಯಾಯನಾ? ಎಂದು ಪ್ರಶ್ನಿಸಿದರು.
ಇದೇ ವೇಳೆ ಲೋಕಸಭೆ ಚುನಾವಣೆ ಬಳಿಕ ಕರ್ನಾಟಕ ಸರ್ಕಾರ ಪಥನವಾಗಲಿದೆ ಎಂಬ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು, “ಆತ ಗಂಡಸು ಇದ್ದರೇ ರಾಜ್ಯದಲ್ಲಿ ಸರ್ಕಾರ ರಚಿಸಲಿ. ಅವರು ಏನಾದರೂ ಗಂಡಸು ಇದ್ದರೆ ರಾಜ್ಯಕ್ಕೆ ಬಂದು, ನಾಲ್ಕು ಜನ ಶಾಸಕರನ್ನು ಕರೆದುಕೊಂಡು ಹೋಗಲಿ. ಮಹಾರಾಷ್ಟ್ರದಲ್ಲಿ ಅಲ್ಲಿ ಏನು ಕಡಿಯಲು ಆಗುತ್ತಿಲ್ಲ. ಆತ ನಮ್ಮ ರಾಜ್ಯದಲ್ಲಿ ಏನು ಕಡಿತಾನ. ಮಹಾರಾಷ್ಟ್ರದಲ್ಲಿ ಮೊದಲು ತಮ್ಮ ಸರ್ಕಾರ ಉಳಿಸಿಕೊಳ್ಳಲಿ. ಅವರ ಸರ್ಕಾರ ಅಲಗಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.