ಬರ ಪರಿಸ್ಥಿತಿ ಹಿನ್ನೆಲೆ: ಸರಳ ದಸರಾ ಆಚರಣೆ : ಡಾ.ಹೆಚ್ ಸಿ ಮಹದೇವಪ್ಪ

ಬೆಂಗಳೂರು

     ರಾಜ್ಯದಲ್ಲಿ ಬರ ಪರಿಸ್ಥಿತಿ ಉಂಟಾಗಿರುವ ಹಿನ್ನೆಲೆಯಲ್ಲಿ ನಾಡಹಬ್ಬ ದಸರಾ ಉತ್ಸವ ಸರಳವಾಗಿ ಆಚರಿಸಲು ಸರ್ಕಾರ ನಿರ್ಧರಿಸಿದೆ.

    ಸಮಾಜ ಕಲ್ಯಾಣ ಇಲಾಖೆ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್ ಸಿ ಮಹದೇವಪ್ಪ ಅವರು ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ.ರೈತರ ಸಂಕಷ್ಟದ ಸಂದರ್ಭಕ್ಕೆ ಪೂರಕವಾಗಿ ಸರ್ಕಾರ ಈ ಬಾರಿ ಸರಳ ದಸರಾ ಆಚರಿಸಲು ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.

    ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವುದರಿಂದ ರೈತಾಪಿ ವರ್ಗವು ಸಂಕಷ್ಟದಲ್ಲಿದೆ. ಈ ಬಾರಿ ಸರಳ ಮತ್ತು ಅರ್ಥಪೂರ್ಣ ದಸರಾ ಆಚರಿಸಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap