ಮುಂಬೈ:
ಮಹಾರಾಷ್ಟ್ರದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ತಂದೆಯೇ ತನ್ನ ಮಗಳನ್ನು ಕೊಲೆ ಮಾಡಿದ್ದಾನೆ. ಪ್ರೀತಿ ಪ್ರೇಮದ ವಿಷಯಕ್ಕಲ್ಲ ಬದಲಾಗಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದೆ ಎನ್ನುವ ಕಾರಣಕ್ಕೆ. ಮಹಾರಾಷ್ಟ್ರದ ಸಾಂಗ್ಲಿಯ ಸಾಧನಾ ಭೋಂಸ್ಲೆ ನೀಟ್ ಪರೀಕ್ಷೆಯ ಅಣಕು ಪರೀಕ್ಷೆಯನ್ನು ತೆಗೆದುಕೊಂಡಿದ್ದಳು. ಒಂದು ವರ್ಷದಿಂದ ನೀಟ್‌ಗಾಗಿ ತಯಾರಿ ನಡೆಸುತ್ತಿದ್ದಳು. ಈ ಬಾರಿ ಮಾಕ್ ಟೆಸ್ಟ್‌ನಲ್ಲಿ ಕಡಿಮೆ ಅಂಕ ತೆಗೆದು ಕೊಂಡಿದ್ದಳು. ಇದರಿಂದ ಸಿಟ್ಟಿಗೆದ್ದ ತಂದೆ ಮಗಳನ್ನು ಕೊಂದಿದ್ದಾರೆ.
ವೃತ್ತಿಯಲ್ಲಿ ಶಿಕ್ಷಕರಾಗಿ ಧೋಂಡಿರಾಮ್ ಭೋಂಸ್ಲೆ ಮಗಳು ಕಡಿಮೆ ಅಂಕಗಳಿಸಿದ್ದಕ್ಕೆ ಆಕೆಯನ್ನು ಕೋಲಿನಿಂದ ಸರಿಯಾಗಿ ಥಳಿಸಿದ್ದಾರೆ. ಇದಾದ ನಂತರ ತಂದೆ ಶಾಲೆಯಲ್ಲಿ ವಿಶ್ವ ಯೋಗ ದಿನದಂದು ಶಾಲೆಯಲ್ಲಿ ಯೋಗ ಕಾರ್ಯಕ್ರಮ ಆಯೋಜನೆಯಾಗಿದ್ದ ಹಿನ್ನೆಲೆಯಲ್ಲಿ ಆ ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕಾಗಿ ಅವರು ಸೀದಾ ಶಾಲೆಗೆ ಹೋಗಿದ್ದಾರೆ. ಇತ್ತ ಅಪ್ಪನ ಹೊಡೆತದಿಂದ ಮಗಳು ಪ್ರಜ್ಞೆ ಕಳೆದುಕೊಂಡಿದ್ದಾಳೆ. ಶಾಲೆಯಿಂದ ಕಾರ್ಯಕ್ರಮ ಮುಗಿಸಿ ಮನೆಗೆ ಬಂದ ವೇಳೆ ಅಪ್ಪನಿಗೆ ಈ ವಿಚಾರ ತಿಳಿದಿದ್ದು, ಕೂಡಲೇ ಮಗಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ದಾಖಲಿಸಿದ್ದಾರೆ. ಸಾಧನಾ ಪ್ರಜ್ಞೆ ತಪ್ಪಿ ಬಿದ್ದಿದ್ದಳು. ನಂತರ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವಳು ಶುಕ್ರವಾರ ಆಸ್ಪತ್ರೆಯಲ್ಲಿ ನಿಧನಳಾಗಿದ್ದಾಳೆ. ಸಾಧನಾ ಭೋಂಸ್ಲೆ ತಲೆಗೆ ಗಾಯಗಳಾಗಿದ್ದವು. ಅವರನ್ನು ಸಾಂಗ್ಲಿಯ ಉಷಾಕಲ್ ಆಸ್ಪತ್ರೆಗೆ ಸಾಗಿಸಲಾಯಿತು, ಆದರೆ ಚಿಕಿತ್ಸೆ ಸಿಗುವ ಮೊದಲೇ ಆಕೆ ಸಾವನ್ನಪ್ಪಿದ್ದಳು.
ಕಡಿಮೆ ಅಂಕಗಳು ಬಂದ ಕಾರಣಕ್ಕೆ ಪತಿ ಆಕೆಗೆ ಹೊಡೆದಿದ್ದರಿಂದ ಆಸ್ಪತ್ರೆಯಲ್ಲಿ ಆಕೆ ಸಾವನ್ನಪ್ಪಿದ್ದಾಳೆ ಎಂದು ಬಾಲಕಿಯ ತಾಯಿ ಜೂನ್ 22 ರಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆರೋಪಿ ತಂದೆಯನ್ನು ಬಂಧಿಸಲಾಗಿದ್ದು, ಜೂನ್ 24 ರವರೆಗೆ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಪ್ರಕರಣ ತನಿಖೆಯಲ್ಲಿದೆ” ಎಂದು ಪೊಲೀಸರು ತಿಳಿಸಿದ್ದಾರೆ.
ನೀಟ್ ಪರೀಕ್ಷೆ ಭಯದಿಂದ ವಿದ್ಯಾರ್ಥಿನಿಯೊಬ್ಬಳು ಆತ್ಯಹತ್ಯೆ ಮಾಡಿಕೊಂಡ ಘಟನೆ ರಾಜಸ್ಥಾನದ ಕೋಟಾದಲ್ಲಿ ನಡೆದಿದೆ. ಶನಿವಾರ ಪಾರ್ಶವನಾಥ್ ಏರಿಯಾದಲ್ಲಿರುವ ಮನೆಯ ಕೋಣೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮೃತ ವಿದ್ಯಾರ್ಥಿನಿಯ ಹೆಸರನ್ನು ಬಹಿರಂಗಪಡಿಸಲು ಪೊಲೀಸರು ನಿರಾಕರಿಸಿದ್ದಾರೆ. ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಾಗ ಕುಟುಂಬಸ್ಥರು ಮನೆಯಲ್ಲಿಯೇ ಇದ್ದರು.
ಶನಿವಾರ ರಾತ್ರಿ 9 ಗಂಟೆ ಸುಮಾರಿಗೆ ವಿದ್ಯಾರ್ಥಿನಿಯು ಶವವಾಗಿ ಪತ್ತೆಯಾಗಿದ್ದಾಳೆ. ಮಾಹಿತಿ ಸಿಕ್ಕ ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು, ವಿದ್ಯಾರ್ಥಿನಿಯನ್ನು ಎಂಬಿಎಸ್ ಆಸ್ಪತ್ರೆಗೆ ರವಾನಿಸಿದ್ದಾರೆ. ವೈದ್ಯರು ಪರೀಕ್ಷೆ ನಡೆಸಿ, ವಿದ್ಯಾರ್ಥಿನಿ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಹಲವು ವರ್ಷಗಳಿಂದ ಕೋಟಾದಲ್ಲಿ ತನ್ನ ಪೋಷಕರೊಂದಿಗೆ ವಾಸಿಸುತ್ತಿದ್ದ ವಿದ್ಯಾರ್ಥಿನಿ, ನೀಟ್-ಯುಜಿಗೆ ತರಬೇತಿ ಸಂಸ್ಥೆಯಲ್ಲಿ ತರಬೇತಿ ಪಡೆಯುತ್ತಿದ್ದರು.








