ದಾವಣಗೆರೆ:
ಕಂಟೈನ್ಮೆಂಟ್ ಝೋನ್ ನಲ್ಲಿ ಕರ್ತವ್ಯನಿರತ ನಗರದ ಸಂಚಾರ ಪೊಲೀಸ್ ಠಾಣೆಯ ಕಾನ್ ಸ್ಟೇಬಲ್ ಓರ್ವರಿಗೆ ಕೊರೊನಾ ಸೋಂಕು ತಗುಲಿರುವುದು ಗುರುವಾರ ದೃಢಪಟ್ಟಿದೆ.
ಸಂಚಾರ ಠಾಣೆಯ ಕಾನ್‌ಸ್ಟೆಬಲ್‌ಗೆ ಕೊರೊನಾ ವೈರಸ್ ತಗುಲಿರುವುದನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಅವರು ದೃಢಪಡಿಸಿದ್ದಾರೆ.
ಈಗಾಗಲೇ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಈಗಾಗಲೇ ಪೊಲೀಸ್ ಕಾನ್ ಸ್ಟೇಬಲ್ ಅವರೊಂದಿಗೆ ಸಂಪರ್ಕ ಹೊಂದಿದ್ದ ಕುಟುಂಬದ ಸದಸ್ಯರು ಸೇರಿ ಸಂಪರ್ಕಿತ ಠಾಣೆಯ ಸಿಬ್ಬಂದಿಯನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ.
ಜಿಲ್ಲೆಯಲ್ಲಿ ಪೇದೆ ಸೇರಿ ಒಟ್ಟು 86 ಜನರಿಗೆ ಸೋಂಕು ತಗುಲಿದ್ದು, ಇಬ್ಬರೂ ಈಗಾಗಲೇ ಗುಣಮುಖರಾಗಿದ್ದು, ನಾಲ್ವರು ಮೃತಪಟ್ಟಿದ್ದಾರೆ.
ಇತ್ತೀಚೆಗೆ ಬಾಷಾನಗರದ ಆರೋಗ್ಯ ಕೇಂದ್ರದ ಶುಶ್ರೂಕಿಯಲ್ಲಿಯೂ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಇದೀಗ ಕೊರೊನಾ ವಾರಿಯರ್ ಪೊಲೀಸ್ ಸಿಬ್ಬಂದಿಗೂ ಸೋಂಕು ತಗುಲಿದ್ದು, ಜನ ಆತಂಕ್ಕೀಡಾಗಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ