ಇಬ್ಬರು ಅಪ್ರಾಪ್ತರಿಂದಲೇ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ….!

ದಾವಣಗೆರೆ:

   ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದೆ. ಆಟವಾಡುತ್ತಿದ್ದ ಬಾಲಕಿಯನ್ನು ಪುಸಲಾಯಿಸಿ ಅಪ್ರಾಪ್ತರು ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ದಾವಣಗೆರೆ ತಾಲೂಕಿನ ಹದಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆಟದ ನೆವದಲ್ಲಿ ಕರೆದೊಯ್ದಿರುವ ಇಬ್ಬರು ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಅವರನ್ನು ಇದೀಗ ವಿಚಾರಣೆಗಾಗಿ ವಶಕ್ಕೆ ಪಡೆಯಾಗಿದೆ.

   ನಿನ್ನೆ ಸಂಜೆ ಆರೋಪಿ, ಅಪ್ರಾಪ್ತ ಬಾಲಕನ ಮನೆಯಲ್ಲಿ ಈ ದುಷ್ಕೃತ್ಯ ನಡೆದಿದ್ದು, ಮನೆಯಲ್ಲಿ ಮಗಳು ಇಲ್ಲದ್ದನ್ನು ಗಮನಿಸಿದ ತಾಯಿ ಹುಡುಕಿಕೊಂಡು ನೆರೆ ಮನೆಗೆ ಹೋದಾಗ ಕೃತ್ಯ ಬೆಳಕಿಗೆ ಬಂದಿದೆ. 15 ವರ್ಷದ ಹಾಗೂ 17 ವರ್ಷದ ಇಬ್ಬರು ಅಪ್ರಾಪ್ತರಿಂದ ಈ ಕೃತ್ಯ ನಡೆದಿದ್ದು, ಇಬ್ಬರನ್ನು ಹದಡಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಾಲಕಿಯನ್ನು ವೈದ್ಯಕೀಯ ಚಿಕಿತ್ಸೆಗೆ ದಾಖಲಿಸಲಾಗಿದೆ.

Recent Articles

spot_img

Related Stories

Share via
Copy link