ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶಕ್ಕೆ ದಿನಗಣನೆ….!

ಬೆಂಗಳೂರು:

    ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಯ  ಮೌಲ್ಯಮಾಪನ ಪ್ರಕ್ರಿಯೆ ಈ ವಾರ ಮುಕ್ತಾಯಗೊಳ್ಳಲಿದ್ದು, ಬಹುತೇಕ ಮುಂದಿನ ವಾರ ಫಲಿತಾಂಶ  ಪ್ರಕಟವಾಗುವ  ನಿರೀಕ್ಷೆ ಇದೆ. ಏಪ್ರಿಲ್ 11ರ ಒಳಗಾಗಿ ಫಲಿತಾಂಶ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ  ಮೂಲಗಳು ತಿಳಿಸಿವೆ. ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯು ಮಾರ್ಚ್ 1 ರಿಂದ 20 ರ ವರೆಗೆ ನಡೆದಿತ್ತು. ಸದ್ಯ ಮೌಲ್ಯಮಾಪನ ಪ್ರಕ್ರಿಯೆ ನಡೆಯುತ್ತಿದೆ.

    ಕಳೆದ ವರ್ಷ ಸೆಕೆಂಡ್ ಪಿಯು ಫಲಿತಾಂಶವನ್ನು ಏಪ್ರಿಲ್ 10ರಂದು ಬಿಡುಗಡೆ ಮಾಡಲಾಗಿತ್ತು. ಈ ವರ್ಷವೂ ಸರಿಸುಮಾರು ಅದೇ ಹೊತ್ತಿಗೆ ಫಲಿತಾಂಶ ಪ್ರಕಟವಾಗುವ ನಿರೀಕ್ಷೆ ಇದೆ.ದ್ವಿತೀಯ ಪಿಯು ಫಲಿತಾಂಶ ಘೋಷಣೆಯಾದ ಕೂಡಲೇ ಇಲಾಖೆಯ ಅಧಿಕೃತ ವೆಬ್​​ಸೈಟ್​​ನಲ್ಲಿಯೂ ಅಪ್​ಲೋಡ್ ಮಾಡಲಾಗುತ್ತದೆ. karresults.nic.in ಅಥವಾ kseab.karnataka.gov.in ವೆಬ್​ಸೈಟ್​​ಗಳಲ್ಲಿ ಫಲಿತಾಂಶ ನೋಡಬಹುದಾಗಿದೆ. ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ karresults.nic.in ಅಥವಾ kseab.karnataka.gov.in ಗೆ ಭೇಟಿ ನೀಡಬೇಕು.

    ಮಾರ್ಚ್ 1ರಿಂದ 20ರವರೆಗೆ ನಡೆದ ಪರೀಕ್ಷೆಗೆ ಒಟ್ಟು 7,13,862 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಒಟ್ಟು 1171 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. 6,61,474 ಹೊಸ ವಿದ್ಯಾರ್ಥಿಗಳು, 34,071 ಪುನರಾವರ್ತಿತ ವಿದ್ಯಾರ್ಥಿಗಳು, 18,317 ಖಾಸಗಿ ವಿದ್ಯಾರ್ಥಿಗಳು ದ್ವಿತೀಯ ಪಿಯು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು.

Recent Articles

spot_img

Related Stories

Share via
Copy link