ಬೆಂಗಳೂರು
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಹಿಂದುಳಿದ ವರ್ಗಗಳ ವಿವಿಧ ನಿಗಮಗಳ ವತಿಯಿಂದ ಒಂದು ಲಕ್ಷದ 14 ಸಾವಿರ ಫಲಾನುಭವಿಗಳಿಗೆ 900 ಕೋಟಿ ರೂಪಾಯಿಗಳನ್ನು ಇಂದು ಬಿಡುಗಡೆ ಮಾಡಿದರು.
ವಿಧಾನಸೌಧದ ಮುಂಭಾಗದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ವಿವಿಧ ಅಭಿವೃದ್ಧಿ ನಿಗಮದಿಂದ ಸವಲತ್ತು ವಿತರಿಸಿ ಅವರು ಮಾತನಾಡಿದರು. ಗಂಗಾ ಕಲ್ಯಾಣ ಯೋಜನೆ ತ್ವರಿತ ಅನುಷ್ಠಾನಕ್ಕಾಗಿ ಫಲಾನುಭವಿಗಳ ಖಾತೆಗೆ ನೇರ ನಗದು ವರ್ಗಾವಣೆ ಮಾಡಲಾಗುವುದು ಎಂದರು.
ಯೋಜನೆಯ ಅನುಷ್ಠಾನದಲ್ಲಿ ಆಗುತ್ತಿರುವ ವಿಳಂಬ ತಪ್ಪಿಸಿ, ಫಲಾನುಭವಿಗಳು ಸೌಲಭ್ಯವನ್ನು ತ್ವರಿತವಾಗಿ ಪಡೆಯಲು ಅನುಕೂಲವಾಗುವಂತೆ ಮೊದಲನೇ ಕಂತಿನ 75 ಸಾವಿರ ರೂಪಾಯಿಗಳನ್ನು ಇಂದೇ ನೇರ ನಗದು ವರ್ಗಾವಣೆ ಮೂಲಕ ಅವರ ಬ್ಯಾಂಕ್ ಖಾತೆಗೆ ತುಂಬಲಾಗುವುದು ಎಂದು ಅವರು ತಿಳಿಸಿದರು.
ಶೋಷಿತರು, ದಮನಿತರ ಭಾವನೆ ಅರ್ಥ ಮಾಡಿಕೊಂಡು ಕೆಲಸ ಮಾಡಿದಾಗ ಜನಪರ ಮತ್ತು ಸ್ಪಂದನಾಶೀಲಾ ಹಾಗೂ ಸಾರ್ಥಕ ಸರ್ಕಾರ ನೀಡಿದಂತಾಗುತ್ತದೆ ಎಂಬ ಗುರಿ ಅಧಿಕಾರ ನಡೆಸುವವರಿಗೆ ಇರಬೇಕು ಎಂದು ಮುಖ್ಯಮಂತ್ರಿ ಹೇಳಿದರು.ಕಾರ್ಯಕ್ರಮದಲ್ಲಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹಾಗೂ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








