‌ತುಮಕೂರು : ಕಾಂಗ್ರೆಸ್‌ ಸೇರಿದ ಡಿ ಸಿ ಗೌರಿಶಂಕರ್…..!

ಬೆಂಗಳೂರು: 

      KPCC ಕಚೇರಿಯಲ್ಲಿ ನಡೆದ ವಿವಿಧ ಪಕ್ಷದ ನಾಯಕರ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಜೆಡಿಎಸ್‌ನ ಗೌರಿಶಂಕರ್ ಹಾಗೂ ಮಂಜುನಾಥ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದ ಸಿದ್ದರಾಮಯ್ಯ ಅವರು  ತುಮಕೂರು ಗ್ರಾಮಾಂತರ ಕ್ಷೇತ್ರದ ಗೌರಿಶಂಕರ್ ಮತ್ತು ದಾಸರಹಳ್ಳಿ ಮಂಜುನಾಥ್ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುವ ಮೂಲಕ ಜಾತ್ಯತೀತ ಮತ್ತು ಸಂವಿಧಾನದ ಮೌಲ್ಯಗಳನ್ನು ಕಾಪಾಡಿಕೊಂಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

      ನಾವಿದ್ದಾಗ ಜನತಾದಳ ಸೆಕ್ಯುಲರ್ ಆಗಿತ್ತು. ಈಗ “ಎಸ್” ಕಿತ್ತೋಗಿ ಕೇವಲ ಜನತಾದಳ ಆಗಿ ಉಳಿದಿದೆ. ಹಿಂದೆಯೂ ಬಿಜೆಪಿ ಜತೆ ಕೈ ಜೋಡಿಸಿದ್ದ ಕಾರಣಕ್ಕೆ ಜನತಾ ಪರಿವಾರದಲ್ಲಿ ಸೆಕ್ಯುಲರ್ ಸಿದ್ದಾಂತದವರೆಲ್ಲಾ ಪ್ರತ್ಯೇಕವಾಗಿ ಉಳಿದೆವು. ಈಗ ಜೆಡಿಎಸ್ ಮತ್ತೆ ಬಿಜೆಪಿ ಜೊತೆ ಬೆರೆಯುತ್ತಿದೆ. ನಾನು ಈ ಜೆಡಿಎಸ್ ಅನ್ನು ಬಿಜೆಪಿಯ “ಬಿ” ಟೀಮ್ ಅಂದಿದ್ದಕ್ಕೆ ಸಿಟ್ಟಾಗಿದ್ದರು.

     ಅಂದು ನಾನು ಹೇಳಿದ್ದನ್ನು ಇಂದು ಅವರೇ ಸಾಬೀತುಪಡಿಸಿದ್ದಾರೆ. ಜೆಡಿಎಸ್ ಈಗ ತನ್ನ ಸ್ವರೂಪದಲ್ಲಿ ಜನಸಮುದಾಯದ ರಾಜಕೀಯ ಪಕ್ಷ ಆಗಿ ಉಳಿದಿಲ್ಲ. ಕೇವಲ ಕುಟುಂಬದ ಪಕ್ಷ ಆಗಿಯಷ್ಟೆ ಸೀಮಿತವಾಗಿದೆ. ಜೆಡಿಎಸ್ ನ ಡಬ್ಬಲ್ ಗೇಮ್ ಅನ್ನು ಸರಿಯಾಗಿ ಅರ್ಥ ಮಾಡಿಕೊಂಡಿರುವ ಗೌರಿಶಂಕರ್ ಮತ್ತು ಮಂಜುನಾಥ್ ಜೊತೆಗೆ ಇನ್ನೂ ಬಹಳ ಮಂದಿ ಕಾಂಗ್ರೆಸ್ ಸೇರುತ್ತಿದ್ದಾರೆ.

      ಆ ಮೂಲಕ ತಮ್ಮ ರಾಜಕೀಯ ಜೀವನವನ್ನು ಭದ್ರ ಮಾಡಿಕೊಳ್ಳುತ್ತಿದ್ದಾರೆ. ನಾವು ಗ್ಯಾರಂಟಿ ಕಾರ್ಯಕ್ರಮಗಳನ್ನು ಕೊಟ್ಟಾಗ ಅದನ್ನು ಟೀಕಿಸಿದ್ದ ಪ್ರಧಾನಿಗಳು ಈಗ “ಮೋದಿ ಗ್ಯಾರಂಟಿ” ಹೆಸರಿನಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಪ್ರಧಾನಿ ಮೋದಿಯವರೇ, ನಿಮಗೆ ನಾಚಿಕೆ ಆಗತ್ತೋ ಇಲ್ಲವೋ? ರಾಜ್ಯದ, ಕನ್ನಡ ನಾಡಿನ ಜನತೆಯ ಹಣ ಇರುವ ಸರ್ಕಾರದ ಕಾರ್ಯಕ್ರಮಗಳನ್ನು ಪ್ರಧಾನಿ ಮೋದಿಯವರು ತಮ್ಮ ಕಾರ್ಯಕ್ರಮ ಎಂದು ಬಿಂಬಿಸಿ ಪ್ರಚಾರ ಪಡೆಯುತ್ತಿರುವುದು ನಾಚಿಕೆಗೇಡಿನ ಸಂಗತಿ. ಇದಕ್ಕೆ ರಾಜ್ಯದ ಜನತೆಯ ಮತ್ತು ನಮ್ಮಗಳ ಬೆಂಬಲ ಇಲ್ಲ ಎಂದಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap