ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿದ ಡಿಸಿ…!

ನಾಗಮಂಗಲ:

     ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಒಳರೋಗಿಗಳಿಗೆ ನೀಡುವ ಒಂದು ಮುದ್ದೆ, ಸಾಂಬರ್‌ ಅಥವಾ ಒಂದು ಪ್ಲೇಟ್‌ ಅನ್ನ ಸಾಂಬರ್‌ಗೆ 92 ರು. ಬಿಲ್‌ ಮಾಡುತ್ತಿರುವುದನ್ನು ಕಂಡು ಶಾಕ್ ಆಂದ ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್‌ ಅವರು, ಆಸ್ಪತ್ರೆಯ ವೈದ್ಯರನ್ನು ತರಾಟೆಗೆ ತೆಗೆದುಕೊಂಡರು.

    ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಿಢೀರ್‌ ಭೇಟಿ ಕೊಟ್ಟಜಿಲ್ಲಾಧಿಕಾರಿಗಳು ಆಸ್ಪತ್ರೆಯ ಮೂಲಸೌಕರ್ಯ ಹಾಗೂ ಕುಂದು ಕೊರತೆಗಳ ಬಗ್ಗೆ ಹೊರರೋಗಿಗಳು ಮತ್ತು ಸಾರ್ವಜನಿಕರಿಂದ ಮಾಹಿತಿ ಪಡೆದುಕೊಳ್ಳುತ್ತಿದ್ದರು. ಈ ವೇಳೆ ಆಸ್ಪತ್ರೆಯ ಒಳರೋಗಿಗಳಿಗೆ ನೀಡುತ್ತಿರುವ ಊಟದ ಬಗ್ಗೆ ಕೆಲವರು ಅಸಮಾಧಾನ ವ್ಯಕ್ತಪಡಿಸಿದರು.

     ಬಳಿಕ ಆಸ್ಪತ್ರೆಯ ವಾರ್ಡ್‌ಗಳಿಗೆ ಭೇಟಿಕೊಟ್ಟು ಪರಿಶೀಲನೆ ನಡೆಸಿ, ಒಳರೋಗಿಗಳ ಆರೋಗ್ಯ ವಿಚಾರಿಸಿದ ಡಿಸಿ, ಆಡಳಿತದ ಖರ್ಚು-ವೆಚ್ಚಗಳ ಕಡತ ಪರಿಶೀಲನೆ ನಡೆಸಲು ಮುಂದಾದರು. ಈ ವೇಳೆ ಒಳರೋಗಿಗಳಿಗೆ ನೀಡುವ ಒಂದು ಮುದ್ದೆ ಸಾಂಬರ್‌ ಅಥವಾ ಒಂದು ಪ್ಲೇಟ್‌ ಅನ್ನ ಸಾಂಬರ್‌ಗೆ 92 ರುೂ, ಒಂದು ಬಾಳೆ ಹಣ್ಣಿಗೆ 8 ರು. ಹಾಗೂ ಒಂದು ಮೊಟ್ಟೆಗೆ 10ರೂ ಬಿಲ್ ಮಾಡುತ್ತಿರುವುದನ್ನು ಕಂಡು ಕೆಂಡಾಮಂಡಲಗೊಂಡರು.

 

    ಆಸ್ಪತ್ರೆಯ ಒಳರೋಗಿಗಳಿಗೆ ನೀಡುವ ಊಟದ ಟೆಂಡರ್‌ನ ಅವಧಿ ಮಾರ್ಚ್ ತಿಂಗಳಿಗೆ ಮುಕ್ತಾಯವಾಗಿದ್ದರೂ ಕೂಡ ಈವರೆಗೂ ಟೆಂಡರ್‌ ಕರೆದಿಲ್ಲವೇಕೆ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.ಈ ವೇಳೆ ತಡಬಡಾಯಿಸಿದ ಗುಮಾಸ್ತ ಮೋಹನ್‌, ಇಲಾಖೆಯ ಮೇಲಾಧಿಕಾರಿಗಳಿಂದ ಅನುಮತಿ ಬಂದಿಲ್ಲ. ಹಾಗಾಗಿ ಟೆಂಡರ್‌ ಕರೆದಿಲ್ಲ ಎಂದು ಹಾರಿಕೆಯ ಉತ್ತರ ನೀಡಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap