ಮೈಸೂರು:
ಮೈಸೂರಿನಲ್ಲಿ ಒಕ್ಕಲಿಗರು ಸುರಕ್ಷಿತರಲ್ಲ ಎಂದು ಹೇಳುವ ಮೂಲಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಟಾರ್ಗೆಟ್ ಮಾಡುತ್ತಿದ್ದಾರೆಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬುಧವಾರ ಹೇಳಿದರು.
ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರಿನಲ್ಲಿ ಒಕ್ಕಲಿಗರಿಗೆ ಭದ್ರತೆ ಇಲ್ಲ ಎನ್ನುವ ಮೂಲಕ ಶಿವಕುಮಾರ್, ಸಿದ್ದರಾಮಯ್ಯನವರಿಂದ ಒಕ್ಕಲಿಗರಿಗೆ ರಕ್ಷಣೆ ಇಲ್ಲ ಎಂದು ಹೇಳಿದ್ದಾರೆ. ಹೇಳಿಕೆ ಹಿಂದಿನ ಅರ್ಥವನ್ನು ಜನರು ಅರ್ಥ ಮಾಡಿಕೊಂಡಿದ್ದಾರೆ. ಹೀಗಾಗಿ ಶೇ.90 ರಷ್ಟು ಒಕ್ಕಲಿಗರು ಬಿಜೆಪಿ-ಜೆಡಿ(ಎಸ್) ಮೈತ್ರಿಗೆ ಒಲವು ತೋರುತ್ತಿದ್ದಾರೆಂದು ಹೇಳಿದರು.
ಯಾವುದೇ ಸಮುದಾಯದ ಬೆಳವಣಿಗೆಯನ್ನು ಸಿದ್ದರಾಮಯ್ಯ ಸಹಿಸುವುದಿಲ್ಲ. ಮುಖ್ಯಮಂತ್ರಿಯಾಗಲು ಅಡ್ಡಿಯಾಗಿದ್ದ ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್ ಅವರನ್ನು ಸೋಲಿಸಿದವರು ಯಾರು? ಈಗಿನ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ 2016ರಲ್ಲಿ ಸಿಎಂ ಆಗುವ ಅವಕಾಶ ಸಿಕ್ಕಾಗ ಖರ್ಗೆ ಅವರನ್ನು ಕೇಂದ್ರಕ್ಕೆ ಕರೆಸದಿದ್ದರೆ ಬಿಜೆಪಿ ಸೇರುತ್ತೇನೆ ಎಂದು ಕಾಂಗ್ರೆಸ್ ಹೈಕಮಾಂಡ್‌ಗೆ ಬೆದರಿಕೆ ಹಾಕಿದ್ದವರು ಯಾರು ? ಎಂದು ಪ್ರಶ್ನಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ