ನವದೆಹಲಿ:
ಅಬಕಾರಿ ನೀತಿ ಹಗರಣ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿದ್ದು ಮನೀಶ್ ಸಿಸೋಡಿಯಾ ಅವರನ್ನು ಸತತ 8 ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಿಸೋಡಿಯಾ ವಿಚಾರಣೆ ಹಿನ್ನೆಲೆಯಲ್ಲಿ ಸಿಬಿಐ ಕೇಂದ್ರ ಕಚೇರಿ ಸುತ್ತಮುತ್ತ ಪೊಲೀಸರು ಸೆಕ್ಷನ್ 144 ಜಾರಿಗೊಳಿಸಿದ್ದರು.
ಎಎಪಿ ಮಹತ್ವಾಕಾಂಕ್ಷೆಯ ದೆಹಲಿ ಅಬಕಾರಿ ನೀತಿಯನ್ನು 31 ಜುಲೈ 2022 ರಂದು ರದ್ದುಗೊಳಿಸಲಾಗಿತ್ತು. ಹೊಸ ನೀತಿಯನ್ನು ರದ್ದುಗೊಳಿಸಿದ ನಂತರ, ದೆಹಲಿ ಸರ್ಕಾರವು ನವೆಂಬರ್ 17, 2020 ರ ಮೊದಲು ಜಾರಿಗೆ ತಂದ ಹಳೆಯ ಅಬಕಾರಿ ಆಡಳಿತವನ್ನು ಮರಳಿ ತರಲು ನಿರ್ಧರಿಸಿತ್ತು. ಅಬಕಾರಿ ನೀತಿ ಜಾರಿಯಾದ ತಕ್ಷಣ ಇಡಿ ಮತ್ತು ಸಿಬಿಐ ಉಪ ಮುಖ್ಯಮಂತ್ರಿ ಮನೆ ಸೇರಿದಂತೆ ದೇಶದ ವಿವಿಧೆಡೆ ಹಲವು ಬಾರಿ ಶೋಧ ನಡೆಸಿದ್ದವು.
