ತುಮಕೂರು:
ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆ ಬಳಿ ಶನಿವಾರ ಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 8ಕ್ಕೇರಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮೃತರೆಲ್ಲರೂ ಶಾಲಾ-ಕಾಲೇಜು ವಿದ್ಯಾರ್ಥಿಗಳು ಎನ್ನಲಾಗಿದೆ.
ವೈ.ಎನ್. ಹೊಸಕೋಟೆಯಿಂದ ಪಾವಗಡಕ್ಕೆ ಬರುತ್ತಿದ್ದ ಖಾಸಗಿ ಬಸ್ ಶನಿವಾರ ಬೆಳಗ್ಗೆ 9 ಗಂಟೆಯಲ್ಲಿ ಅಪಘಾತಕ್ಕೀಡಾಗಿದೆ. ಈ ಬಸ್ನಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳೇ ಪ್ರಯಾಣಿಸುತ್ತಿದ್ದರು. ಪಳವಳ್ಳಿ ಕಟ್ಟೆ ಬಳಿ ಚಾಲಕನ ನಿಯಂತ್ರಣ ತಪ್ಪಿದ ಬಸ್, ರಸ್ತೆ ಡಿವೈಡರ್ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.
ಸ್ಥಳದಲ್ಲೇ 6 ವಿದ್ಯಾರ್ಥಿಗಳು ಮೃತಪಟ್ಟಿದ್ದು, ಮತ್ತಿಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ. 20ಕ್ಕೂ ಹೆಚ್ಚು ಮಂದಿಯ ಸ್ಥಿತಿ ಗಂಭೀರವಾಗಿದೆ. ಮತ್ತಷ್ಟು ಸಾವು-ನೋವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದ್ದು, ಪಾಲಕರು ಮತ್ತು ಕುಟುಂಸ್ಥರ ಗೋಳಾಟ ಮುಗಿಲು ಮುಟ್ಟಿದೆ.
ಗಾಯಾಳುಗಳನ್ನು ಪಾವಗಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರ ಗಾಯಗೊಂಡವರನ್ನು ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತದ ಭೀಕರತೆ ಕಂಡ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಮೃತದೇಹಗಳು ರಸ್ತೆ, ರಸ್ತೆ ಬದಿ… ಹೀಗೆ ಎಲ್ಲೆಂದರಲ್ಲಿ ಚೆಲ್ಲಾಪಿಲ್ಲಿಯಾಗಿದ್ದವು.
ಹೋಳಿ ಆಡಲು ಹೋದವನಿಗೆ ಶಾಕ್; ಆಟಕ್ಕೂ ಮುನ್ನ ಪ್ರಾಣ ಕಳೆದುಕೊಂಡ ಬಾಲಕ..
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ