ನಾಳೆ ರಾಜ್ಯಾಧ್ಯಂತ ‘ಎಲ್ಲಾ ಶಾಲೆ’ಗಳಿಗೆ ರಜೆ ಘೋಷಣೆ – ‘ಶಿಕ್ಷಣ ಇಲಾಖೆ’ ಆದೇಶ

ಬೆಂಗಳೂರು:

  ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಇಂದಿನಿಂದ ವೀಕೆಂಡ್ ಕರ್ಪ್ಯೂ  ಜಾರಿಗೊಳಿಸಲಾಗಿದೆ. ಈ ಸಂದರ್ಭದಲ್ಲಿ ಈಗಾಗಲೇ ಬೆಂಗಳೂರು ನಗರದಲ್ಲಿ ಶಾಲೆಗಳಿಗೆ ರಜೆ  ಘೋಷಣೆ ಮಾಡಲಾಗಿದೆ.

     ವೀಕೆಂಡ್ ಕರ್ಪ್ಯೂ ಸಂದರ್ಭದಲ್ಲಿ ರಾಜ್ಯಾಧ್ಯಂತವೂ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ ಮಾಡಿ, ಶಿಕ್ಷಣ ಇಲಾಖೆ  ಆದೇಶಿಸಿದೆ.

ಈ ಕುರಿತಂತೆ ಸುತ್ತೋಲೆ ಹೊರಡಿಸಿರುವಂತ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು, ಓಮಿಕ್ರಾನ್, ಕೊರೋನಾ ನಿಯಂತ್ರಣದ ಸುರಕ್ಷತಾ ಕ್ರಮವಾಗಿ ಬೆಂಗಳೂರು ನಗರ ಜಿಲ್ಲೆಯ ಶಾಲೆಗಳಲ್ಲಿ ಮುಂದಿನ ಆದೇಶದವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಈಗಾಗಲೇ ತಿಳಸಾಲಿಗಿದೆ.

ದಿನಾಂಕ 06-01-2022ರಿಂದ ದಿನಾಂಕ 19-01-2022ರವರೆಗೆ ಅಥವಾ ಮುಂದಿನ ಆದೇಶದವರೆಗೆ ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಯ 10ನೇ ತರಗತಿವರೆಗಿನ ಎಲ್ಲಾ ಶಾಲೆಗಳನ್ನು, ಕೋಚಿಂಗ್ ಸೆಂಟರ್ ಸ್ಥಗಿತಗೊಳಿಸಲು ಕ್ರಮವಹಿಸುವಂತೆ ಸೂಚಿಸಲಾಗಿದೆ.

ಮುಂದುವರೆದು ದಿನಾಂಕ 05-01-2022 ರಿಂದ 19-01-2022ರ ಅವಧಿಯಲ್ಲಿ ಶುಕ್ರವಾರ ರಾತ್ರಿ 10 ಗಂಟೆಯಿಂದ, ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ರಾಜ್ಯಾಧ್ಯಂತ ವಾರಾಂತ್ಯ ಕರ್ಪ್ಯೂ ಜಾರಿಯಲ್ಲಿರುವುದರಿಂದ,

ಈ ಅವಧಿಯಲ್ಲಿ ಶನಿವಾರಗಳಂದು ರಾಜ್ಯಾಧ್ಯಂತ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳನ್ನು ನಡೆಸದಿರಲು ಕ್ರಮವಹಿಸುವಂತೆ ಆಯಾ ಜಿಲ್ಲೆಗಳ ಉಪ ನಿರ್ದೇಶಕರುಗಳಿಗೆ ತಿಳಿಸಿದ್ದಾರೆ.

 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap