ಹಿರಯ ಪತ್ರಕರ್ತ ದೀಪಕ್ ತಿಮ್ಮಯ್ಯ ಕಾಂಗ್ರೆಸ್‌ ಸೇರ್ಪಡೆ ….!

ಬೆಂಗಳೂರು:

   ಹಿರಿಯ ಪತ್ರಕರ್ತ ದೀಪಕ್ ತಿಮ್ಮಯ್ಯ ಅವರನ್ನು ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು.

   ಸದಾಶಿವನಗರ ನಿವಾಸದಲ್ಲಿ ದೀಪಕ್ ತಿಮ್ಮಯ್ಯ ಪಕ್ಷಕ್ಕೆ ಬರಮಾಡಿಕೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, “ಹಿರಿಯ ಪತ್ರಕರ್ತರಾದ ದೀಪಕ್ ತಿಮ್ಮಯ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷರ ರಾಜಕೀಯ ಹಾಗೂ ಸಂವಹನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದ್ದು, ಅವರಿಗೆ ಕಾಂಗ್ರೆಸ್ ಕಚೇರಿಯಲ್ಲಿ ಕಚೇರಿ ನೀಡಲಾಗುವುದು. ಪಕ್ಷದ ವಿಚಾರವಾಗಿ ಯಾರೇ ನನ್ನನ್ನು ಸಂಪರ್ಕ ಮಾಡಲು ಅವರು ಸಹಕಾರ ನೀಡಲಿದ್ದಾರೆ ಎಂದು ತಿಳಿಸಿದರು.

    ಮಾಧ್ಯಮ ಕ್ಷೇತ್ರದಲ್ಲಿ ಸುಮಾರು 30-40 ವರ್ಷಗಳ ಅನುಭವವಿರುವ ದೀಪಕ್ ತಿಮ್ಮಯ, ತಮ್ಮದೇ ಆದ ಸಂಸ್ಥೆ ಮೂಲಕ ಮಕ್ಕಳನ್ನು ನಾಯಕರನ್ನಾಗಿ ರೂಪಿಸುವ ಕೆಲಸ ಮಾಡಿಕೊಂಡು ಬಂದಿದ್ದಾರೆ. ನಾಯಕರನ್ನು ಸೃಷ್ಟಿಸುವವನು ನಾಯಕನೇ ಹೊರತು ಹಿಂಬಾಲಕರನ್ನು ಸೃಷ್ಟಿಸುವವನು ಅಲ್ಲ ಎಂಬಂತೆ ಕೆಲಸ ಮಾಡುತ್ತಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತ, ವಿಚಾರವಾಗಿ ಅವರು ನನಗೆ ಅನೇಕ ಉತ್ತಮ ಸಲಹೆಗಳನ್ನು ನೀಡಿದ್ದಾರೆ. ಹೀಗಾಗಿ ಅವರಿಗೆ ಕಾಂಗ್ರೆಸ್ ಪಕ್ಷದ ಭಾಗವಾಗುವಂತೆ ಮನವಿ ಮಾಡಿದ್ದೆ. ಅದನ್ನು ಒಪ್ಪಿ ಅವರು ಇಂದು ಪಕ್ಷಕ್ಕೆ ಸೇರ್ಪಡೆ ಆಗಿದ್ದು, ಈ ಜವಾಬ್ದಾರಿ ತೆಗೆದುಕೊಳ್ಳುತ್ತಿದ್ದಾರೆ ಎಂದು ಉಪ ಮುಖ್ಯಮಂತ್ರಿ ಮಾಹಿತಿ ನೀಡಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap