ಕೊಡಗು
ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ವಿಡಿಯೋ ಮಾಡಿದ್ದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಪೊಲೀಸರು ಮೂವರನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಫಾಹಾದ್, ಬಾಸಿಲ್, ಹಾಗು ಸಮೀರ್ ಎಂದು ಗುರುತಿಸಲಾಗಿದೆ.
ಸ್ಪೈಸಸ್ ಅಂಗಡಿಯಲ್ಲಿ ಕುಳಿತು ಆರೋಪಿಗಳು ವಿಡಿಯೋ ಮಾಡಿದ್ದರು. ಅವಾಚ್ಯ ಪದಗಳಿಂದ ಪ್ರಧಾನಿ ನರೇಂದ್ರ ಮೋದಿಯನ್ನು ಆರೋಪಿಗಳು ನಿಂದಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಮೂವರ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಈ ಕುರಿತು ಮಡಿಕೇರಿ ನಗರ ಠಾಣೆಗೆ ಕೊಡಗು ಜಿಲ್ಲಾ ಬಿಜೆಪಿ ದೂರು ನೀಡಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ನಡೆಸಿ ಮೂವರು ಆರೋಪಿಗಳನ್ನು ಆರೆಸ್ಟ್ ಮಾಡಿದ್ದಾರೆ.








