ರಾಜ್ಯದಲ್ಲೂ ಭುಗಿಲೆದ್ದ ಮಹಿಳಾ ಮೀಸಲಾತಿ ಜಿದ್ದಾಜಿದ್ದಿ : ಸಿಎಂ – ಡಿಸಿಎಂ ವಾಗ್ದಾಳಿ

ನವದೆಹಲಿ: ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಡು ಮೀಸಲಾತಿ ನೀಡುವ ಮಹಿಳಾ ಮಸೂದೆಯನ್ನು ತಡೆಯಲು ಟಿಎಂಸಿ, ಕಾಂಗ್ರೆಸ್ ಜೊತೆ ಒಪ್ಪಂದ ಮಾಡಿಕೊಂಡಿದೆ. ಪಶ್ವಿಮ ಬಂಗಾಳದಲಿ ಮಹಾ ಜಂಗಲ್ ರಾಜ್ ಸರ್ಕಾರಕ್ಕೆ ತಕ್ಕ ಪಾಠ ಕಲಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಇಂದಿಲ್ಲಿ ಮನವಿ ಮಾಡಿದ್ದು ಮಹಿಳಾ ಮೀಸಲಾತಿಯಿಂದಲೇ ಪ್ರಧಾನಿ ನರೇಂದ್ರ ಮೋದಿ ಪತನ ಆರಂಭ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿರುಗೇಟು ನೀಡಿದ್ದಾರೆ. ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೋಲಿಗೆ ಬಿಜೆಪಿ ಮತ್ತು ಪ್ರತಿಪಕ್ಷಗಳ ನಡುವೆ ಜಟಾಪಟಿ ತಾರಕಕ್ಕೇರಿದೆ.
ಬಿಷ್ಣುಪುರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ -ಟಿಎಂಸಿ ಮಹಿಳಾ ಮೀಸಲಾತಿ ಮಸೂದೆ ಕೆಳಮನೆಯಲ್ಲಿ ವಿಫಲವಾಗುವಂತೆ ನೋಡಿಕೊಳ್ಳಲು ಕಾಂಗ್ರೆಸ್ ಜೊತೆ ಒಪ್ಪಂದ ಮಾಡಿಕೊಂಡಿದೆ.,ಇದರ ಪರಿಣಾಮ ಮಹಿಳಾ ಮೀಸಲಾತಿ ಲೋಕಸಭೆಯಲ್ಲಿ ಪಾಸಾಗಲಿಲ್ಲ ಎಂದು ಹೇಳಿದರು.
ಟಿಎಂಸಿ ಮತ್ತು ಕಾಂಗ್ರೆಸ್ ಸೇರಿದಂತೆ ಇಂಡಿ ಒಕ್ಲೂಟ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಪಾಸಾಗುವುದನ್ನು ತಡೆದಿದೆ. ಈ ಮೂಲಕ ಮಹಿಳೆಯರ ರಾಜಕೀಯ ಹಕ್ಕು ಕಸಿದಿದೆ ಎಂದು ಕಿಡಿಕಾರಿದ್ದಾರೆ.
ಪಶ್ವಿಮ ಬಂಗಾಳದ ಮಹಿಳೆಯರು ಶೇಕಡಾ 33 ರಷ್ಟು ಮೀಸಲಾತಿ ಬಯಸಿದ್ದರು. 2029 ರಿಂದ ಮೀಸಲಾತಿ ಜಾರಿಗೆ ತರಬೇಕೆಂದು ಬಯಸಲಾಗಿತ್ತು. ಆದರೆ ಬಂಗಾಳದ ಹೆಣ್ಣುಮಕ್ಕಳು ಮಹಾ ಜಂಗಲ್ ರಾಜ್ ಅನ್ನು ಪ್ರಶ್ನಿಸುತ್ತಿದ್ದರಿಂದ ಬಂಗಾಳದ ಹೆಚ್ಚಿನ ಹೆಣ್ಣುಮಕ್ಕಳು ಶಾಸಕರು ಮತ್ತು ಸಂಸದರಾಗುವುದನ್ನು ಟಿಎಂಸಿ ಬಯಸಲಿಲ್ಲ. ಆದ್ದರಿಂದ, ಟಿಎಂಸಿ, ಕಾಂಗ್ರೆಸ್ ಜೊತೆಗೆ ಸೇರಿ, ಮಹಿಳೆಯರಿಗೆ ಮೀಸಲಾತಿ ನೀಡುವ ಕಾನೂನನ್ನು ಅಂಗೀಕರಿಸದAತೆ ಪಿತೂರಿ ನಡೆಸಿ ತಡೆದಿದೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ
ದೇಶದ ಮತ್ತಷ್ಟು ಅಭಿವೃದ್ಧಿ ಮತ್ತು ವಿಕಸಿತ ಭಾರತದ ಕನಸನ್ನು ನನಸಾಗಿಸಲು ದೇಶದ ರಾಜಕೀಯದಲ್ಲಿ ಮಹಿಳೆಯರ ಹೆಚ್ಚಿನ ಭಾಗವಹಿಸುವಿಕೆಯನ್ನು ಬಯಸಿದೆ, ಆದರೆ ಟಿಎಂಸಿ ಪಶ್ಚಿಮ ಬಂಗಾಳದ ತಾಯಂದಿರು ಮತ್ತು ಸಹೋದರಿಯರಿಗೆ ದ್ರೋಹ ಮಾಡಿದೆ ಎಂದು ಆರೋಪಿಸಿದ್ದಾರೆ.
ಪಶ್ವಿಮ ಬಂಗಾಳದಲ್ಲಿ ಎರಡು ಹಂತಗಳಲ್ಲಿ ನಡೆಯುವ ವಿಧಾನಸಭಾ ಚುನಾವಣೆಗಳು ರಾಜ್ಯದ ಇತಿಹಾಸವನ್ನೇ ಬದಲಾಯಿಸಲಿವೆ .ಈ ಬಾರಿ ಟಿಎಂಸಿಗೆ ಪಾಠ ಕಲಿಸಿ ಎಂದಿದ್ದಾರೆ.ಪಶ್ಚಿಮ ಬಂಗಾಳಕ್ಕೆ ನುಸುಳುಕೋರರು ಪ್ರವೇಶಿಸುವುದನ್ನು ಖಚಿತಪಡಿಸಿಕೊಳ್ಳಲು ಟಿಎಂಸಿ ಎಲ್ಲಾ ಕಾನೂನುಗಳನ್ನು ಉಲ್ಲಂಘಿಸಿದೆ ಮತ್ತು ನಂತರ ಅವರಿಗೆ ಧರ್ಮದ ಆಧಾರದ ಮೇಲೆ ಕೋಟಾ ನೀಡಲಾಗಿದೆ .ಎಂದು ಮುಖ್ಯಮಂತ್ರಿ ಬ್ಯಾನರ್ಜಿ ಪಕ್ಷದ ವಿರುದ್ಧ ಸಂಪೂರ್ಣ ದಾಳಿ ನಡೆಸಿದ ಪ್ರಧಾನಿ, ಮೇ 4 ರಂದು ಫಲಿತಾಂಶಗಳು ಪ್ರಕಟವಾದ ನಂತರ ಎಲ್ಲಾ ಟಿಎಂಸಿ ಗೂಂಡಾಗಳು ಪೊಲೀಸರಿಗೆ ಶರಣಾಗಬೇಕು ಏಕೆಂದರೆ ಅವರನ್ನು ಬಿಡಲಾಗುವುದಿಲ್ಲ ಎಂದು ಗುಡುಗಿದರು.
ಮೋದಿ ಪತನ ಆರಂಭ
ಪ್ರಧಾನಿ ನರೇಂದ್ರ ಮೋದಿ ಅವರ ಪತನ ಆರಂಭವಾಗಿದೆ, ಗಡಿ ನಿರ್ಣಯ ಮಸೂದೆ ಭಾರತ, ಬಂಗಾಳವನ್ನು ವಿಭಜಿಸುವ ತಂತ್ರ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿರುಗೇಟು ನೀಡಿದ್ದಾರೆ. ಮಹಿಳಾ ಮೀಸಲು ಮಸೂದೆ ಲೋಕಸಭೆಯಲ್ಲಿ ವಿಫಲವಾದ ಹಿನ್ನೆಲೆಯಲ್ಲಿ ಪ್ರತಿ ಪಕ್ಷಗಳ ವಿರುದ್ಧ ಹರಿಹಾಯ್ದ ಪ್ರಧಾನಿ ನರೇಂದ್ರ ಮೋದಿ ಟೀಕಾ ಪ್ರಹಾರ ನಡೆಸಿದರು.
ಕ್ಷೇತ್ರ ಪುನರ್ ವಿಂಗಡಣೆ ಮಸೂದೆ ಭಾರತ ಮತ್ತು ಬಂಗಾಳವನ್ನು ವಿಭಜಿಸುವ ಒಂದು ತಂತ್ರವಾಗಿತ್ತು ಪ್ರಧಾನಿ ನರೇಂದ್ರ ಮೋದಿಯವರ ಪತನ ಅಧಿಕೃತವಾಗಿ ಪ್ರಾರಂಭವಾಗಿದೆ. ಮಹಿಳಾ ಮೀಸಲಾತಿ ಮಸೂದೆ ಕೇವಲ ಚುನಾವಣಾ ಜನಸಂಖ್ಯಾಶಾಸ್ತçವನ್ನು ಕುಶಲತೆಯಿಂದ ನಿರ್ವಹಿಸುವ ಆಳವಾದ ಪಿತೂರಿ ಎಂದಿದ್ದಾರೆ.
ಮಹಿಳೆಯರಿಗೆ 33% ಮೀಸಲಾತಿ ನೀಡಬೇಕೆಂದು ಬಿಜೆಪಿ ಎಂದಿಗೂ ಒತ್ತಾಯಿಸಿಲ್ಲ :
ರಾಣೇಬೆನ್ನೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿ, ಸಂವಿಧಾನದ 73,74 ನೇ ತಿದ್ದುಪಡಿಗಳನ್ನು ರಾಜೀವ್ ಗಾಂಧಿಯವರು ಪ್ರಧಾನ ಮಂತ್ರಿಯಾಗಿದ್ದಾಗ ತಂದಿದ್ದರು. ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ ನೀಡಬೇಕೆಂದು ಬಿಜೆಪಿ ಎಂದಿಗೂ ಒತ್ತಾಯಿಸಿಲ್ಲ. ಈಗ ಮಾತ್ರ ಮಹಿಳಾ ಮೀಸಲಾತಿಗೆ ಒತ್ತಾಯಿಸಿ ರಾಜಕೀಯ ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.
ಕ್ಷೇತ್ರ ಮರುವಿಂಗಡನೆಯಿ0ದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ :
ಕ್ಷೇತ್ರ ಮರುವಿಂಗಡನೆಯಿ0ದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯವಾಗುತ್ತದೆ. ದಕ್ಷಿಣದಲ್ಲಿ 50% ಮಾಡಿದರೆ ಉತ್ತರ ಪ್ರದೇಶದಲ್ಲಿ 80 ಸ್ಥಾನಗಳಿವೆ. ಅಲ್ಲಿಗೆ 120 ಸ್ಥಾನಗಳಾಗುತ್ತವೆ. ಕರ್ನಾಟಕದಲ್ಲಿ 42 ಸ್ಥಾನಗಳಾಗುತ್ತವೆ. ಉತ್ತರ ಭಾರತದಲ್ಲಿ ಸ್ಥಾನಗಳು ಹೆಚ್ಚಾಗುವುದರ ಬಗ್ಗೆ ನಮ್ಮ ವಿರೋಧವೇ ಹೊರತು ಮಹಿಳಾ ಮೀಸಲಾತಿಗೆ ವಿರೋಧವಿಲ್ಲ. ಅದರ ಪರವಾಗಿದ್ದೇವೆ ಎಂದರು.
ಸಂವಿಧಾನ ತಿದ್ದುಪಡಿಗೆ ಮೂರನೇ ಎರಡರಷ್ಟು ಬಹುಮತ ಲೋಕಸಭೆಯಲ್ಲಿ ಇರಬೇಕು. 50% ರಾಜ್ಯಗಳು ಇದಕ್ಕೆ ಒಪ್ಪಿಗೆ ನೀಡಬೇಕು ಎಂದರು. ಕ್ಷೇತ್ರ ಮರು ವಿಂಗಡಣೆಗೆ ವಿರೋಧ ಮಾಡಿದ್ದೇವೆ ಹೊರತು ಮಹಿಳಾ ಮೀಸಲಾತಿಗೆ ನಮ್ಮ ವಿರೋಧವಿಲ್ಲ ಎಂದರು.
ಪ್ರಧಾನಮಂತ್ರಿಗಳಿ0ದ ರಾಜಕೀಯ
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕಾಂಗ್ರೆಸ್ ಮಹಿಳಾ ಮೀಸಲಾತಿ ವಿರೋಧಿಗಳು ಎಂದು ಭಾಷಣ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ತಮಿಳುನಾಡು , ಪಶ್ಚಿಮ ಬಂಗಾಳದ ಚುನಾವಣೆ ಇರುವುದರಿಂದ ರಾಜಕೀಯ ಮಾಡುತ್ತಿದ್ದಾರೆ ಎಂದರು.
ಮಹಿಳಾ ಮೀಸಲಾತಿಗೆ ನಮ್ಮ ವಿರೋಧವಿಲ್ಲ: ಸಿ.ಎಂ ಸ್ಪಷ್ಟನೆ
ರಾಣೇಬೆನ್ನೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಹಿಳಾ ಮೀಸಲಾತಿ ಮಸೂದೆ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ 2023ರಲ್ಲಿಯೇ ಅಂಗೀಕಾರವಾಗಿದೆ. ಪ್ರಸ್ತುತ ಕ್ಷೇತ್ರ ಮರುವಿಂಗಡನೆಯನ್ನು ಸೇರಿಸಿ ಮಂಡಿಸಿದ್ದಾರೆ. ನಾವು ಮಹಿಳಾ ಮೀಸಲಾತಿಗೆ ವಿರೋಧವಿಲ್ಲ. 450 ಮತಗಳನ್ನು ಪಡೆದು ಅಂಗೀಕಾರವಾಗಿರುವ ಮಸೂದೆಯನ್ನು ಮೋದಿಯವರು ಏಕೆ ಜಾರಿಮಾಡಲಿಲ್ಲ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು ಕ್ಷೇತ್ರ ಮರುವಿಂಗಡನೆಯನ್ನು ಬೇರ್ಪಡಿಸಿ ಮಸೂದೆ ತಂದಿದ್ದರೆ, ಯಾರೂ ವಿರೋಧಿಸುತ್ತಿರಲಿಲ್ಲ ಮಹಿಳಾ ಮೀಸಲಾತಿಗೆ ಕಾಂಗ್ರೆಸ್ ಪಕ್ಷ ಎಂದಿಗೂ ವಿರೋಧ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.
ಕ್ಷೇತ್ರ ಮರುವಿಂಗಡಣೆ ಎಂಬ ಕುತಂತ್ರ: ಡಿಸಿಎಂ
ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕೇಂದ್ರದ ಎನ್ಡಿಎ ಸರ್ಕಾರವು ಮಹಿಳಾ ಸಬಲೀಕರಣದ ಮುಖವಾಡ ಧರಿಸಿ ದಕ್ಷಿಣ ಭಾರತದ ರಾಜಕೀಯ ಅಸ್ಮಿತೆಯನ್ನು ಅಳಿಸಲು ‘ಭೀಕರ ಸಂಚು’ ರೂಪಿಸಿದೆ. ಬಿಜೆಪಿ ಜಾರಿಗೆ ತರಲು ಹೊರಟಿರುವ ಮಹಿಳಾ ಮೀಸಲಾತಿ ಮಸೂದೆಯು ಕೇವಲ ಒಂದು ‘ಮಾಯಾಜಾಲ’ವಾಗಿದ್ದು, ಇದು ದಕ್ಷಿಣದ ರಾಜ್ಯಗಳ ಹಕ್ಕುಗಳನ್ನು ಕಸಿದುಕೊಳ್ಳಲು ನಡೆಸುತ್ತಿರುವ ‘ರಾಜಕೀಯ ಸರ್ಜಿಕಲ್ ಸ್ಟೆçöÊಕ್’ ಎಂದು ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮಹಿಳೆಯರಿಗೆ ರಾಜಕೀಯ ಅಧಿಕಾರ ಸಿಗಬೇಕು ಎಂಬುದು ಕಾಂಗ್ರೆಸ್ ಪಕ್ಷದ ಅಚಲ ನಿಲುವು. ರಾಜೀವ್ ಗಾಂಧಿಯವರು ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿ ತಂದಾಗ ವಿರೋಧಿಸಿದವರು ಈಗ ಮಹಿಳಾ ಮೀಸಲಾತಿಯ ಜಪ ಮಾಡುತ್ತಿದ್ದಾರೆ. ಆದರೆ, ಈ ಮೀಸಲಾತಿ ಜಾರಿಯಾಗಲು ‘ಕ್ಷೇತ್ರ ಮರುವಿಂಗಡಣೆ’ ಆಗಲೇಬೇಕು ಎಂಬ ಷರತ್ತು ವಿಧಿಸಿರುವುದು ತರ್ಕಹೀನವಾದುದು. ಇದು ಮಹಿಳೆಯರಿಗೆ ತಕ್ಷಣಕ್ಕೆ ನ್ಯಾಯ ಒದಗಿಸುವ ಬದಲು, ಮೀಸಲಾತಿಯನ್ನು ಮುಂದೂಡುವ ಮತ್ತು ಮರುವಿಂಗಡಣೆಯನ್ನು ಬಿಜೆಪಿಯ ಅನುಕೂಲಕ್ಕೆ ತಕ್ಕಂತೆ ಬಳಸಿಕೊಳ್ಳುವ ಷಡ್ಯಂತ್ರವಾಗಿದೆ ಎಂದು ಕಿಡಿಕಾರಿದ್ದಾರೆ.
ಹೌರಾದ ಉಲುಬೇರಿಯಾ ಮತ್ತು ದಕ್ಷಿಣ 24 ಪರಗಣದ ಬರೂಯಿಪುರ, ಭಾಂಗರ್ ಮತ್ತು ಸೋನಾರ್ಪುರದಲ್ಲಿ ನಡೆದ ರ್ಯಾಲಿಗಳನ್ನುದ್ದೇಶಿಸಿ ಮಾತನಾಡಿದ ಮಮತಾ ಬ್ಯಾನರ್ಜಿ, ಕ್ಷೇತ್ರ ಪುನರ್ವಿಂಗಡಣೆಯೊAದಿಗೆ ಜೋಡಿಸುವ ಬಿಜೆಪಿಯ ವಿಫಲ ಪ್ರಯತ್ನ ದೇಶ ಮತ್ತು ಬಂಗಾಳವನ್ನು ವಿಭಜಿಸುವ ಕೇಂದ್ರದ ನಿಜವಾದ ಆಟವನ್ನು ಬಹಿರಂಗಪಡಿಸಿದೆ. ಶಾಸಕಾಂಗಗಳಲ್ಲಿ ಮಹಿಳಾ ಕೋಟಾ ಜಾರಿಗೆ ತರಲು ಸಂವಿಧಾನ ತಿದ್ದುಪಡಿ ಮಸೂದೆಯನ್ನು ಅಂಗೀಕರಿಸುವಲ್ಲಿ ವಿಫಲವಾದ ನಂತರ ಬಿಜೆಪಿ ನೇತೃತ್ವದ ಕೇಂದ್ರದ ಮೇಲೆ ದಾಳಿ ನಡೆಸಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಪ್ರಧಾನಿ ನರೇಂದ್ರ ಮೋದಿ ಅವರ ಅವನತಿ ಸಂಸತ್ತಿನಲ್ಲಿ ಪ್ರಾರಂಭವಾಗಿದೆ. ಬಂಗಾಳದಲ್ಲಿ ಮುಂದುವರಿಯುತ್ತದೆ.
ಮಮತಾ ಬ್ಯಾನರ್ಜಿ, ಮುಖ್ಯಮಂತ್ರಿ
ಭಾರತೀಯ ಜನತಾ ಪಕ್ಷಮಹಿಳಾ ಸಬಲೀಕರಣ, ಅವರ ಸುರಕ್ಷತೆ ಮತ್ತು ಭದ್ರತೆಗೆ ಸಮಾನಾರ್ಥಕವಾಗಿದೆ ಮತ್ತು ಅದಕ್ಕಾಗಿಯೇ ಕೇಸರಿ ಪಕ್ಷ ನಿರಂತರವಾಗಿ ಅವರ ಬೆಂಬಲ ಪಡೆಯುತ್ತಿದೆ ಎಂದು ಹೇಳಿದ ಅವರು ಪಶ್ಚಿಮ ಬಂಗಾಳದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವುದು ಖಚಿತ, ಅದಕ್ಕಾಗಿಯೇ ಟಿಎಂಸಿ ಭಯಭೀತವಾಗಿದೆ ಮತ್ತು ಜನರನ್ನು ಬೆದರಿಸುತ್ತಿದೆ.
ನರೇಂದ್ರ ಮೋದಿ, ಪ್ರಧಾನಮಂತ್ರಿ








