ಕೃತಕ ಮಳೆ ಸುರಿಸಲು ಕೇಂದ್ರದ ಒಪ್ಪಿಗೆ ಕೋರಿದ ದೆಹಲಿ ಸರ್ಕಾರ

ನವದೆಹಲಿ: 

   ರಾಷ್ಟ್ರ ರಾಜಧಾನಿಯಲ್ಲಿ ಮಾಲಿನ್ಯದ ಮಟ್ಟ ಆತಂಕಕಾರಿಯಾಗಿ ಹೆಚ್ಚಿರುವ ಹಿನ್ನೆಲೆಯಲ್ಲಿ ದೆಹಲಿ ಪರಿಸರ ಸಚಿವ ಗೋಪಾಲ್ ರೈ ಅವರು ಈ ಸಮಸ್ಯೆಯನ್ನು ಪರಿಹರಿಸಲು ತುರ್ತು ಸಭೆ ಕರೆಯಬೇಕು ಮತ್ತು ಈ ವಿಷಯದಲ್ಲಿ ಮಧ್ಯಪ್ರವೇಶಿಸುವುದು ಪ್ರಧಾನಿ ನರೇಂದ್ರ ಮೋದಿ ಅವರ ನೈತಿಕ ಜವಾಬ್ದಾರಿಯಾಗಿದೆ ಎಂದು ಮಂಗಳವಾರ ಹೇಳಿದ್ದಾರೆ.

   ಇಂದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರೈ, ರಾಷ್ಟ್ರ ರಾಜಧಾನಿಯಲ್ಲಿ ಕೃತಕ ಮಳೆ ಸುರಿಸಲು ಅವಕಾಶ ನೀಡುವಂತೆ ದೆಹಲಿ ಸರ್ಕಾರದ ಪದೇ ಪದೇ ಮನವಿ ಮಾಡಿದರೂ ಕೇಂದ್ರ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ. ಈ ಸಂಬಂಧ ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಅವರಿಗೆ ಮತ್ತೊಮ್ಮೆ ಪತ್ರ ಬರೆಯುವುದಾಗಿ ತಿಳಿಸಿದರು.

    “ದೆಹಲಿಯು GRAP(ಗ್ರೇಡೆಡ್ ರೆಸ್ಪಾನ್ಸ್ ಆಕ್ಷನ್ ಪ್ಲಾನ್) ಹಂತ IV ನಿರ್ಬಂಧಗಳ ಅಡಿಯಲ್ಲಿದೆ. ವಾಹನ ಮತ್ತು ಕೈಗಾರಿಕಾ ಮಾಲಿನ್ಯವನ್ನು ಕಡಿಮೆ ಮಾಡಲು ನಾವು ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ. ನಗರಕ್ಕೆ ಪ್ರವೇಶಿಸುವ ವಾಹನಗಳ ಸಂಖ್ಯೆಯನ್ನು ನಿಗ್ರಹಿಸುವ ಉದ್ದೇಶದಿಂದ ಖಾಸಗಿ ವಾಹನಗಳು ಮತ್ತು ಟ್ರಕ್‌ಗಳ ಮೇಲೆ ನಿರ್ಬಂಧಗಳನ್ನು ವಿಧಿಸಲಾಗಿದೆ ಎಂದರು. ಹೊಗೆ ಕಡಿಮೆ ಮಾಡಲು ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ನಾವು ತಜ್ಞರೊಂದಿಗೆ ಚರ್ಚಿಸುತ್ತಿದ್ದೇವೆ. ಇದು ಮಾಲಿನ್ಯಕಾರಕ ಅಂಶಗಳನ್ನು ಕಡಿಮೆ ಮಾಡಲು ಮತ್ತು ಗಾಳಿಯನ್ನು ತೆರವುಗೊಳಿಸಲು ಕೃತಕ ಮಳೆಯೂ ಒಂದು ಪರಿಹಾರವಾಗಿದೆ ಎಂದು ದೆಹಲಿ ಸಚಿವರು ಹೇಳಿದ್ದಾರೆ.

   ನಗರದಲ್ಲಿನ ಭೀಕರ ಮಾಲಿನ್ಯ ನಿಯಂತ್ರಿಸಲು ಕೃತಕ ಮಳೆಗೆ ಅವಕಾಶ ಮಾಡಿಕೊಡುವ ಕುರಿತು ತುರ್ತು ಸಭೆ ಕರೆಯುವಂತೆ ದೆಹಲಿ ಸರ್ಕಾರದಿಂದ ಪದೇ ಪದೇ ಮನವಿ ಮಾಡಿದರೂ ಕೇಂದ್ರ ಪರಿಸರ ಸಚಿವರು ಸ್ಪಂದಿಸುತ್ತಿಲ್ಲ ಎಂದು ರೈ ಆರೋಪಿಸಿದ್ದಾರೆ.”ಈ ವಿಚಾರದಲ್ಲಿ ಕೇಂದ್ರ ಸರ್ಕಾರ ಕಾರ್ಯನಿರ್ವಹಿಸಲು ಸಾಧ್ಯವಾಗದಿದ್ದರೆ, ಪರಿಸರ ಸಚಿವರು ರಾಜೀನಾಮೆ ನೀಡಬೇಕು” ಎಂದು ರೈ ಆಗ್ರಹಿಸಿದ್ದಾರೆ.

Recent Articles

spot_img

Related Stories

Share via
Copy link