ನವದೆಹಲಿ:
ವಿವಾದಿತ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಗೆ ದೆಹಲಿ ಹೈಕೋರ್ಟ್ ದೊಡ್ಡ ರಿಲೀಫ್ ನೀಡಿದ್ದು, ಬಂಧನದಿಂದ ”ಮಧ್ಯಂತರ” ರಕ್ಷಣೆ ನೀಡಿದೆ.
ವಂಚನೆ ಮತ್ತು ಒಬಿಸಿ ಕೋಟಾ ವಂಚನೆ ಮತ್ತು ಅಂಗವೈಕಲ್ಯ ಕೋಟಾ ಪ್ರಯೋಜನಗಳನ್ನು ತಪ್ಪಾಗಿ ಪಡೆದ ಪ್ರಕರಣದಲ್ಲಿ ಸೋಮವಾರ ದೆಹಲಿ ಕೋರ್ಟ್ ಮಾಜಿ ಐಎಎಸ್ ಟ್ರೈನಿ ಪೂಜಾ ಖೇಡ್ಕರ್ ಅವರಿಗೆ ರಿಲೀಫ್ ನೀಡಿದ್ದು, ಬಂಧನದಿಂದ ಮಧ್ಯಂತರ ರಕ್ಷಣೆ ನೀಡಿದೆ. ಆ ಮೂಲಕ ಆಗಸ್ಟ್ 21 ರವರೆಗೆ ಪೂಜಾ ಖೇಡ್ಕರ್ ಅವರನ್ನು ಬಂಧಿಸದಂತೆ ಹೈಕೋರ್ಟ್ ದೆಹಲಿ ಪೊಲೀಸರಿಗೆ ಆದೇಶ ನೀಡಿದೆ.
2022 ರ ಯುಪಿಎಸ್‌ಸಿ ಸಿವಿಲ್ ಸರ್ವೀಸಸ್ ಪರೀಕ್ಷೆಗೆ ಸಲ್ಲಿಸಿದ ಅರ್ಜಿಯಲ್ಲಿ ‘ತಪ್ಪು ಮಾಹಿತಿ ನೀಡಿದ’ ಆರೋಪದ ಮೇಲೆ ದೆಹಲಿಯಲ್ಲಿ ಆಕೆಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಇತ್ತೀಚೆಗೆ, ಕೇಂದ್ರ ಲೋಕಸೇವಾ ಆಯೋಗವು ಜುಲೈ 31 ರಂದು ಪೂಜಾ ಅವರ ಉಮೇದುವಾರಿಕೆಯನ್ನು ರದ್ದುಗೊಳಿಸಿದ್ದು ಮಾತ್ರವಲ್ಲದೇ ಭವಿಷ್ಯದಲ್ಲಿ ಯಾವುದೇ UPSC ಪರೀಕ್ಷೆಗೆ ಹಾಜರಾಗದಂತೆ ನಿರ್ಬಂಧಿಸಿದೆ.