ನವದೆಹಲಿ:
ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಜಾಮೀನು ಅರ್ಜಿಯ ಆದೇಶವನ್ನು ದೆಹಲಿ ನ್ಯಾಯಾಲಯವು ಗುರುವಾರ ಕಾಯ್ದಿರಿಸಿದೆ. ವಿಶೇಷ ನ್ಯಾಯಾಧೀಶ ನಿಯಾಯ್ ಬಿಂದು ಅವರು ಅರ್ಜಿಯ ಕುರಿತು ಆರೋಪಿ ಮತ್ತು ಜಾರಿ ನಿರ್ದೇಶನಾಲಯದ (ಇ.ಡಿ) ವಾದಗಳನ್ನು ಆಲಿಸಿದ ನಂತರ ಆದೇಶವನ್ನು ಕಾಯ್ದಿರಿಸಿದ್ದಾರೆ.
ಪ್ರಕರಣದಲ್ಲಿ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ಜುಲೈ 3ರವರೆಗೆ ನ್ಯಾಯಾಲಯ ಬುಧವಾರ ವಿಸ್ತರಿಸಿದೆ. ಈ ಹಿಂದೆ ನೀಡಲಾಗಿದ್ದ ನ್ಯಾಯಾಂಗ ಬಂಧನದ ಅವಧಿ ಮುಗಿದಿದ್ದರಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಿದ ನ್ಯಾಯಾಧೀಶರು ಕೇಜ್ರಿವಾಲ್ ಅವರ ಕಸ್ಟಡಿಯನ್ನು ವಿಸ್ತರಿಸಿದ್ದರು.