ದೆಹಲಿ:
ಸೆಂಟ್ರಲ್ ಬ್ಯುರೋ ಇನ್ವೆಸ್ಟಿಗೇಷನ್ ಈಗ ಬಿಜೆಪಿ ಬ್ಯುರೋ ಆಫ್ ಇನ್ವೆಸ್ಟಿಗೇಶನ್ ಆಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಟೀಕಿಸಿದ್ದಾರೆ.
“ಸಿಬಿಐ ಬಿಬಿಐ ಆಗಿದೆ (ಬಿಜೆಪಿ ಬ್ಯರೋ ಆಫ್ ಇನ್ವೆಸ್ಟಿಗೇಶನ್), ದುರಾದೃಷ್ಟಕರ” ಎಂದು ಮಮತಾ ಬ್ಯಾನರ್ಜಿ ಟ್ವೀಟ್ ಮಾಡಿದ್ದಾರೆ.
CBI has now become so called BBI ( BJP Bureau of Investigation ) – very unfortunate!
— Mamata Banerjee (@MamataOfficial) October 24, 2018
ದೇಶದ ಅತ್ಯುನ್ನತ ತನಿಖಾ ಏಜೆನ್ಸಿ ಸಿಬಿಐನ ಇಬ್ಬರು ಅತ್ಯುನ್ನತ ಅಧಿಕಾರಿಗಳನ್ನು ಹುದ್ದೆಯಿಂದ ಕೆಳಗಿಳಿಸಿದ ಕೇಂದ್ರ ಸರಕಾರದ ಕ್ರಮ ವಿಪಕ್ಷಗಳ ತೀವ್ರ ವಾಗ್ದಾಳಿಗೆ ಗುರಿಯಾಗಿದ್ದು, ಸರಕಾರ ರಫೇಲ್ ಹಗರಣವನ್ನು ಈ ಮೂಲಕ ಮುಚ್ಚಿ ಹಾಕಲು ಯತ್ನಿಸುತ್ತಿದೆ ಎಂದು ಕಾಂಗ್ರೆಸ್ ದೂರಿದೆ. ಈ ವಿಚಾರ ಈಗ ಭಾರೀ ಚರ್ಚೆಗೆ ಕಾರಣವಾಗಿದ್ದು, ವಿರೋಧ ಪಕ್ಷಗಳು ಆಡಳಿತಾರೂಢ ಬಿಜೆಪಿ ವಿರುದ್ಧ ಆರೋಪ ಮಾಡುತ್ತಿವೆ.
ಸರಕಾರ ತಾನೇ ಸ್ವತಃ ಆಯ್ಕೆ ಮಾಡಿ ನೇಮಿಸಿದ ಅಧಿಕಾರಿಯನ್ನು ರಕ್ಷಿಸುವ ಯತ್ನಗಳು ನಡೆಯುತ್ತಿವೆ ಎಂದು ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯಚೂರಿ ಆರೋಪಿಸಿದ್ದಾರೆ. ಕೇಂದ್ರ ಸರಕಾರದ ಕ್ರಮದ ವಿರುದ್ಧ ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕೂಡ ಕಿಡಿಕಾರಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2018/10/Mamata-Banerjee-621x414-1.gif)