ನವದೆಹಲಿ :
ಕೊರೋನಾ ವೈರಸ್ ನಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿರುವ ತಬ್ಲಿಘಿಗಳು ಪ್ಲಾಸ್ಮಾ ದಾನ ಮಾಡುವುದಾಗಿ ಪ್ರತಿಜ್ಞೆ ಮಾಡಿದ್ದಾರೆ ಎನ್ನಲಾಗಿದೆ.
ಕೋವಿಡ್ ಚಿಂತಾಜನಕ ರೋಗಿಗಳ ಚಿಕಿತ್ಸೆಗಾಗಿ ಪ್ಲಾಸ್ಮಾ ದಾನ ಮಾಡುವಂತೆ ಇತ್ತಿಚೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕರೆ ನೀಡಿದ್ದರು. ಇದೀಗ ರಂಜಾನ್ ಮಾಸದ ಹಿನ್ನೆಲೆಯಲ್ಲಿ ಈಗಾಗಲೇ ನಾಲ್ವರು ತಬ್ಲಿಘಿಗಳು ಪ್ಲಾಸ್ಮಾ ನೀಡಿದ್ದಾರೆ. ಅಲ್ಲದೆ ಇನ್ನು ಹಲವರು ನೀಡುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.
ಈ ಬಗ್ಗೆ ಸ್ಪಷ್ಟನೆ ನೀಡಿರುವ ಆರೋಗ್ಯ ಇಲಾಖೆಯ ಅಧಿಕಾರಿಗಳು 200ಕ್ಕೂ ಹೆಚ್ಚು ಜಮಾತ್ ಸದಸ್ಯರು ತೀವ್ರ ಸೋಂಕಿನಿಂದ ಬಳಲುತ್ತಿರುವ ಇತರೆ ರೋಗಿಗಳ ಚಿಕಿತ್ಸೆಗಾಗಿ ಪ್ಲಾಸ್ಮಾ ದಾನ ಮಾಡಲು ಮುಂದೆ ಬಂದಿದ್ದಾರೆ. ರೋಗ ಮುಕ್ತಿಗೊಂಡಿರುವ ತಬ್ಲಿಘಿ ಜಮಾತ್ ಸದಸ್ಯರ ವೈದ್ಯಕೀಯ ಪರೀಕ್ಷೆ ನೆರವೇರಿಸಲಾಗುತ್ತಿದ್ದು, ಪ್ಲಾಸ್ಮಾ ಸಂಗ್ರಹಣೆಯನ್ನು ಮಾಡುತ್ತಿದ್ದೇವೆ ಎಂದಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ