ನ್ಯಾಯಾಧೀಶರ ರಜೆ ಕಡಿತಗೊಳಿಸಲು ಮುಂದಾದ ಸಿಜೆಐ

0
72

‌ನವದೆಹಲಿ: 

      ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಹೊಸ ರಜೆ ನೀತಿಯನ್ನು ಜಾರಿಗೆ ತಂದಿದ್ದು, ಕೆಲಸದ ದಿನಗಳಲ್ಲಿ ನ್ಯಾಯಧೀಶರು ರಜೆಗಳನ್ನು ತೆಗೆದುಕೊಳ್ಳುವಂತಿಲ್ಲ ಎಂದು ಸೂಚನೆ ನೀಡಿದ್ದಾರೆ.

      ಸುಪ್ರೀಂಕೋರ್ಟ್, ಹೈಕೋರ್ಟ್ ಹಾಗೂ ವಿಚಾರಣಾ ನ್ಯಾಯಾಲಯಗಳಲ್ಲಿ ಸುಮಾರು ಮೂರು ಕೋಟಿ ಪ್ರಕರಣಗಳ ವಿಚಾರಣೆ ಬಾಕಿ ಉಳಿದಿರುವ ಹಿನ್ನೆಲೆಯಲ್ಲಿ ಸಿಜೆಐ ಗೊಗೊಯ್ ಅವರು ನ್ಯಾಯಾಧೀಶರ ರಜೆಗೆ ಕತ್ತರಿ ಹಾಕಲು ಮುಂದಾಗಿದ್ದಾರೆ.

      ಅಧಿಕಾರ ಸ್ವೀಕರಿಸಿದ ಒಂದು ವಾರದಲ್ಲೇ ಎಲ್ಲ ಹೈಕೋರ್ಟ್‌ನ ಕೊಲೀಜಿಯಂ ಸದಸ್ಯೆರೊಂದಿಗೆ ಅವರು ಸಂವಹನ ನಡೆಸಿದ್ದಾರೆ. ಅಷ್ಟೇ ಅಲ್ಲದೆ, ಇಬ್ಬರು ಹಿರಿಯ ನ್ಯಾಯಾಧೀಶರ ಜತೆ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿರುವ ಅವರು, ವಿಚಾರಣೆಯಾಗದೇ ಬಾಕಿ ಉಳಿದಿರುವ ಪ್ರಕರಣಗಳ ಸಂಖ್ಯೆ ಕಡಿಮೆ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ. 

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

LEAVE A REPLY

Please enter your comment!
Please enter your name here