ನವದೆಹಲಿ :
ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದ ಸಂಸದೀಯ ಸಮಾಲೋಚನ ಸಮಿತಿಗೆ ಬಿಜೆಪಿ ಸಂಸದೆ ಹಾಗೂ ಮಲೆಗಾಂವ್ ಸ್ಪೋಟದ ಆರೋಪಿ ಪ್ರಗ್ಯಾ ಸಿಂಗ್ ಠಾಕೂರ್ ಅವರನ್ನು ನೇಮಕ ಮಾಡಲಾಗಿದೆ.
2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪ್ರಗ್ಯಾ ಸಿಂಗ್, ಭರ್ಜರಿ ಗೆಲುವು ಸಾಧಿಸಿ ಮೊದಲ ಬಾರಿ ಸಂಸತ್ ಮೆಟ್ಟಿಲೇರಿದ್ದರು. ಇದೀಗ ಅವರನ್ನು ಸಂಸದೀಯ ಸಮಾಲೋಚನೆ ಸಮಿತಿಗೆ ನೇಮಕ ಮಾಡಲಾಗಿದೆ.
21 ಸದಸ್ಯರನ್ನು ಹೊಂದಿರುವ ರಕ್ಷಣಾ ಸಚಿವಾಲಯದ ಸಂಸದೀಯ ಸಮಾಲೋಚನಾ ಸಮಿತಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ನೇತೃತ್ವ ವಹಿಸಿದ್ದು, ಈ ಸಮಿತಿಯಲ್ಲಿ ಪ್ರಜ್ಞಾ ಠಾಕೂರ್ ಕೂಡ ಇದೀಗ ಒಬ್ಬರಾಗಿದ್ದಾರೆ.
ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ ಅಡಿ ಪ್ರಗ್ಯಾ ಸಿಂಗ್ ವಿರುದ್ಧದ ಪ್ರಕರಣವನ್ನು ಎನ್ ಐಎ ಕೈ ಬಿಟ್ಟ ಮೇಲೆ ಅನಾರೋಗ್ಯದ ಆಧಾರದ ಮೇಲೆ ಬಾಂಬೆ ಹೈಕೋರ್ಟ್ 2017 ರಲ್ಲಿ ಅವರಿಗೆ ಜಾಮೀನು ನೀಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ