ನವದೆಹಲಿ:
ಸಿಬಿಐ ಮುಖ್ಯಸ್ಥ ಅಲೋಕ್ ವರ್ಮಾ ಅವರ ಮೇಲಿನ ಆರೋಪಗಳ ಕುರಿತು 10 ದಿನಗಳೊಳಗಾಗಿ ತನಿಖೆ ಪೂರ್ಣಗೊಳಿಸುವಂತೆ ಸಿವಿಸಿಗೆ ಸುಪ್ರೀಂಕೋರ್ಟ್ ಶುಕ್ರವಾರ ಸೂಚಿಸಿದೆ.
ತಮ್ಮನ್ನು ಒತ್ತಾಯಪೂರ್ವಕವಾಗಿ ರಜೆಯ ಮೇಲೆ ಕಳಿಸಿದ್ದನ್ನು ಪ್ರಶ್ನಿಸಿ ಸಿಬಿಐ ನಿರ್ದೇಶಕ ಅಲೋಕ್ ಕುಮಾರ್ ವರ್ಮಾ ಸಲ್ಲಿಸಿರುವ ಅರ್ಜಿಯ ವಿಚಾರಣೆ ಸುಪ್ರೀಂಕೋರ್ಟ್‌ನಲ್ಲಿ ಶುಕ್ರವಾರ ಬೆಳಿಗ್ಗೆ ಆರಂಭವಾಯಿತು.
ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ನ್ಯಾಯಪೀಠವು, ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ವಿರುದ್ಧ ಕೇಂದ್ರ ಜಾಗೃತ ಆಯೋಗವು 10 ದಿನಗಳ ಒಳಗೆ ತನಿಖೆ ಪೂರ್ಣಗೊಳಿಸಬೇಕು. ತನಿಖೆಯ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಕೋರ್ಟ್ಗೆ ಸಲ್ಲಿಸಬೇಕು ಎಂದು ತಿಳಿಸಿದೆ.
ಇದೇ ವೇಳೆ ಸಿಬಿಐನ ಮಧ್ಯಂತರ ನಿರ್ದೇಶಕರಾಗಿ ಸರ್ಕಾರ ನೇಮಿಸಿರುವ ಎಂ.ನಾಗೇಶ್ವರ್ ರಾವ್ ಅವರು ಯಾವುದೇ ಮುಖ್ಯ ನೀತಿ ನಿರೂಪಣೆಯ ನಿರ್ಧಾರಗಳನ್ನು ತೆಗೆದುಕೊಳ್ಳುವಂತಿಲ್ಲ. ಅ.23ರಿಂದ ನ.12ರವರೆಗೆ ನಾಗೇಶ್ವರ್ ರಾವ್ ಅವರು ತೆಗೆದುಕೊಂಡಿರುವ ಎಲ್ಲ ನಿರ್ಧಾರಗಳನ್ನು ಮುಚ್ಚಿದ ಲಕೋಟೆಯಲ್ಲಿ ಸುಪ್ರೀಂಕೋರ್ಟ್‌ಗೆ ಸಲ್ಲಿಸಬೇಕು ಎಂದು ಸೂಚಿಸಿತು. ನ.12ಕ್ಕ ಪ್ರಕರಣದ ವಿಚಾರಣೆಯನ್ನು ಮುಂದೂಡಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
