ನ್ಯೂಸ್ ಕ್ಲಿಕ್ ಅಕ್ರಮ: ದೆಹಲಿ ಪೊಲೀಸರಿಂದ ದಾಳಿ

ನವದೆಹಲಿ:

ಚೀನಾ ಕಂಪನಿಗಳಿಂದ ಅಕ್ರಮವಾಗಿ ಹಣಪಡೆದ ಪ್ರಕರಣಕ್ಕೆ ಸಂಬಂಧಿಸಿ ನ್ಯೂಸ್‌ಕ್ಲಿಕ್ ಡಿಜಿಟಲ್ ಮಾಧ್ಯಮಕ್ಕೆ ಸಂಬಂಧಿಸಿದಂತೆ ವಿವಿಧ ಸ್ಥಳಗಳಲ್ಲಿ ದೆಹಲಿ ಪೊಲೀಸರು ದಾಳಿ ನಡೆಸಿದ್ದಾರೆ.

   ನ್ಯೂಸ್‌ಕ್ಲಿಕ್‌ನ ಕೆಲವು ಪತ್ರಕರ್ತರ ಮನೆ ಮೇಲೆ ದಾಳಿ ನಡೆಸಲಾಗಿದೆ. ಆದರೇ ಯಾವುದೇ ಬಂಧನವಾಗಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

   ದಾಳಿ ವೇಳೆ ಪತ್ರಕರ್ತರ ಲ್ಯಾಪ್‌ಟಾಪ್ ಮತ್ತು ಮೊಬೈಲ್ ಫೋನ್‌ಗಳನ್ನು ದೆಹಲಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ನ್ಯೂಸ್‌ಕ್ಲಿಕ್ ಸುದ್ದಿ ಪೊರ್ಟಲ್ ಚೀನಾದಿಂದ ಹಣ ಪಡೆಯುತ್ತಿದೆ ಎಂಬ ಆರೋಪದ ಮೇರೆಗೆ ದೆಹಲಿ ಪೊಲೀಸರು ಹೊಸ ಪ್ರಕರಣ ದಾಖಲಿಸಿಕೊಂಡು ಮತ್ತೆ  ತನಿಖೆ ಆರಂಭಿಸಿದ್ದಾರೆ.

Recent Articles

spot_img

Related Stories

Share via
Copy link
Powered by Social Snap