ದೆಹಲಿ ವಿಧಾನಸಭಾ ಚುನಾವಣೆಗೆ ಮುನ್ನ ಎಎಪಿ-ಕಾಂಗ್ರೆಸ್ ಜಟಾಪಟಿ ತೀವ್ರ

ನವದೆಹಲಿ: 

   ದೆಹಲಿ ವಿಧಾನಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷ(ಎಎಪಿ) ನಡುವಿನ ಜಟಾಪಟಿ ಮತ್ತಷ್ಟು ತೀವ್ರಗೊಂಡಿದ್ದು, ಇಂಡಿಯಾ ಮೈತ್ರಿಕೂಟದಿಂದ ದೆೇಶದ ಹಳೆಯ ಪಕ್ಷವನ್ನು ತೆಗೆದುಹಾಕುವ ಗುರಿಯನ್ನು ಎಎಪಿ ಹೊಂದಿದೆ.ಕಾಂಗ್ರೆಸ್‌ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಎಎಪಿ ನಾಯಕರು, ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಪಕ್ಷದ ಭವಿಷ್ಯವನ್ನು ಹಾಳುಮಾಡಲು ಬಿಜೆಪಿಯೊಂದಿಗೆ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದೆ.

   ಇಂಡಿಯಾ ಮೈತ್ರಿಕೂಟದಿಂದ ಕಾಂಗ್ರೆಸ್ ಅನ್ನು ಹೊರಗಿಡಲು ಬಣದ ಇತರ ಮಿತ್ರ ಪಕ್ಷಗಳನ್ನು ಸಂಪರ್ಕಿಸುವ ಯೋಜನೆಯನ್ನು ಎಎಪಿ ನಾಯಕರು ಘೋಷಿಸಿದರು. ಇದು ಉಭಯ ಪಕ್ಷಗಳ ನಡುವಿನ ಉದ್ವಿಗ್ನತೆ ಹೆಚ್ಚಿಸಿದೆ ಮತ್ತು ಇಂಡಿಯಾ ಮೈತ್ರಿಕೂಟವನ್ನು ಮತ್ತಷ್ಟು ದುರ್ಬಲಗೊಳಿಸುವ ಸಾಧ್ಯತೆ ಇದೆ. ಇಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ದೆಹಲಿ ಮುಖ್ಯಮಂತ್ರಿ ಅತಿಶಿ ಮತ್ತು ಆಮ್ ಆದ್ಮಿ ಪಕ್ಷದ(ಎಎಪಿ) ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಅವರು, ಕಾಂಗ್ರೆಸ್ ನ ಕ್ರಮಗಳು ಇಂಡಿಯಾ ಮೈತ್ರಿಕೂಟದ ಏಕತೆಗೆ ಹಾನಿ ಮಾಡುತ್ತಿವೆ ಎಂದು ಆರೋಪಿಸಿದರು.

   “ಹರಿಯಾಣ ಚುನಾವಣೆಯ ಸಂದರ್ಭದಲ್ಲಿ ನಾವು ಕಾಂಗ್ರೆಸ್ ವಿರುದ್ಧ ಒಂದೇ ಒಂದು ಮಾತನ್ನೂ ಹೇಳಿರಲಿಲ್ಲ. ಆದರೂ ಕಾಂಗ್ರೆಸ್ ಬಿಜೆಪಿಯ ಸ್ಕ್ರಿಪ್ಟ್ ಅನ್ನು ಓದುತ್ತಿದೆ ಎಂದು ತೋರುತ್ತಿದೆ. ಅದರ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಕಚೇರಿಯಲ್ಲಿ ಅಂತಿಮಗೊಳಿಸಲಾಗಿದೆ” ಎಂದು ಸಿಂಗ್ ವಾಗ್ದಾಳಿ ನಡೆಸಿದರು.

   ಕಾಂಗ್ರೆಸ್ ನಾಯಕರಾದ ಅಜಯ್ ಮಾಕೆನ್ ಮತ್ತು ಸಂದೀಪ್ ದೀಕ್ಷಿತ್ ಅವರು ಭಾರತೀಯ ಜನತಾ ಪಕ್ಷವನ್ನು(ಬಿಜೆಪಿ) ಕೇಂದ್ರೀಕರಿಸುವ ಬದಲು ಎಎಪಿಯನ್ನು ಗುರಿಯಾಗಿಸಿದ್ದಾರೆ ಎಂದು ಆರೋಪಿಸಿದರು.

   “ಅಜಯ್ ಮಾಕನ್ ಅವರು ಅರವಿಂದ್ ಕೇಜ್ರಿವಾಲ್ ಅವರನ್ನು ದೇಶವಿರೋಧಿ ಎಂದು ಕರೆಯುವ ಮೂಲಕ ಎಲ್ಲಾ ಮಿತಿಗಳನ್ನು ದಾಟಿದ್ದಾರೆ. ಹಿಂದಿನ ಚುನಾವಣೆಗಳಲ್ಲಿ ಕಾಂಗ್ರೆಸ್ ಪರವಾಗಿ ಪ್ರಚಾರ ಮಾಡಿದರೂ ಕೇಜ್ರಿವಾಲ್ ಈಗ ಎಫ್‌ಐಆರ್ ಎದುರಿಸುತ್ತಿದ್ದಾರೆ. ಆದರೆ ಕಾಂಗ್ರೆಸ್ ಯಾವುದೇ ಬಿಜೆಪಿ ನಾಯಕರ ವಿರುದ್ಧ ಒಂದೇ ಒಂದು ಎಫ್‌ಐಆರ್ ದಾಖಲಿಸಿಲ್ಲ” ಎಂದು ಸಿಂಗ್ ಹೇಳಿದರು.

   ಕಾಂಗ್ರೆಸ್ ಸಕ್ರಿಯವಾಗಿ ಎಎಪಿಯನ್ನು ದುರ್ಬಲಗೊಳಿಸುತ್ತಿದೆ. “ಕಾಂಗ್ರೆಸ್ ಅಭ್ಯರ್ಥಿಗಳಾದ ಸಂದೀಪ್ ದೀಕ್ಷಿತ್ ಮತ್ತು ಫರ್ಹಾದ್ ಸೂರಿ ಬಿಜೆಪಿಯಿಂದ ಬೆಂಬಲ ಪಡೆಯುತ್ತಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಈ ಒಪ್ಪಂದವು ಇಂಡಿಯಾ ಮೈತ್ರಿಗೆ ಕಾಂಗ್ರೆಸ್‌ನ ಬದ್ಧತೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕುತ್ತಿದೆ” ಎಂದು ದೆಹಲಿ ಸಿಎಂ ಅತಿಶಿ ಹೇಳಿದರು.

Recent Articles

spot_img

Related Stories

Share via
Copy link