ತುಮಕೂರು:

ನಗರದ ಅಶೋಕ ರಸ್ತೆಯಲ್ಲಿನ ಕಾಮ್ರೆಡ್ ಪಂಪಾಪತಿ ಭವನದಲ್ಲಿ ಭಾರತ ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಮಂಡಳಿಯ ಕಾಮ್ರೆಡ್ ಗಳ ಸಮ್ಮುಖದಲ್ಲಿ ಜಿಲ್ಲಾಧ್ಯಕ್ಷ ಹೆಚ್.ಜಿ. ಉಮೇಶ್ ಮತ್ತಿತರರು ಪ್ರಜಾಪ್ರಗತಿ ದಿನಪತ್ರಿಕೆಯ ಯುಗಾದಿ ವಿಶೇಷ ಸಂಚಿಕೆಯನ್ನು ಬಿಡುಗಡೆಗೊಳಿಸಿ,
ಪತ್ರಿಕೆಯು ಕಾರ್ಮಿಕರ ಪರವಾದ ಸುದ್ದಿಗಳ ಪ್ರಕಟಣೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ನಿವೃತ್ತ ಶಿಕ್ಷಕ ಕೆ. ನಾಗಪ್ಪ, ಭಾರತೀಯ ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಆವರಗೆರೆ ಚಂದ್ರು, ಖಜಾಂಚಿ ಆನಂದರಾಜ್, ಇಪ್ಟಾ ಸಂಚಾಲಕ ಐರಣಿ ಚಂದ್ರು, ಟಿ.ಎಸ್. ನಾಗರಾಜ್, ಪ್ರಜಾಪ್ರಗತಿ ದಿನಪತ್ರಿಕೆಯ ವ್ಯವಸ್ಥಾಪಕರಾದ.ಬಿ.ಚನ್ನವೀರಯ್ಯ ಎನ್.ಟಿ. ಬಸವರಾಜ್, ಸರೋಜಮ್ಮ, ವಿ. ಲಕ್ಷ್ಮಣ ಸೇರಿದಂತೆ ಇತರರು ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








